ಸುಪಾರಿ ಪ್ರಕರಣ: ಪತ್ರಕರ್ತ ರವಿ ಬೆಳಗೆರೆಗೆ 14 ದಿನ ನ್ಯಾಯಾಂಗ ಬಂಧನ
ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಕೋರ್ಟ್ ಆದೇಶ ಹೊರಡಿಸಿದೆ.

Published On :
ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆಯನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಕೋರ್ಟ್ ಆದೇಶ ಹೊರಡಿಸಿದೆ.
ಈ ಹಿಂದೆ ರವಿ ಬೆಳಗೆರೆ ಅವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ನಗರದ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಬೆಳೆಗೆರೆ ಪರ ವಕೀಲರಾದ ದಿನಕರ್ ಅವರು ಕೋರ್ಟ್ ಗೆ ಆಗಮಿಸಲು ತಡವಾಗಿದ್ದ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಿದ ಕೆಲ ಹೊತ್ತಿನಲ್ಲಿಯೇ ನ್ಯಾಯಾಧೀಶರು ವಿಚಾರಣೆಯನ್ನು ಸುಮಾರು ಅರ್ಧ ಗಂಟೆಗಳ ಕಾಲ ಮುಂದೂಡಿದ್ದರು. ಬಳಿಕ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ರವಿ ಬೆಳೆಗೆರೆಯನ್ನು ಡಿಸೆಂಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. ಈ ಹಿನ್ನೆಲೆಯಲ್ಲಿ ರವಿ ಬೆಳೆಗೆರೆಗೆ ಬೇಲಾ, ಜೈಲಾ ಎಂಬ ಕುತೂಹಲಕ್ಕೆ ತೆರೆ ಬಿದ್ದಂತಾಗಿದ್ದು, ರವಿ ಬೆಳಗೆರೆ ಇದೀಗ ಪರಪ್ಪನ ಅಗ್ರಹಾರದತ್ತ ಮುಖ ಮಾಡುವಂತಾಗಿದೆ.
ಇನ್ನು ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದ ರವಿ ಬೆಳಗೆರೆ ಪ್ರತಿದಿನ ನಾನು ಮಾತ್ರೆ ಮತ್ತು ಇಂಜಕ್ಷನ್ ತೆಗೆದುಕೊಳ್ಳಬೇಕಾಗಿದೆ. ಅದಕ್ಕಾಗಿಯೇ ನನ್ನ ವೈದ್ಯರಿಗೆ ನನ್ನ ಭೇಟಿ ಮಾಡಲು ಅವಕಾಶ ನೀಡಬೇಕು, ಜೈಲಿನಲ್ಲಿ ನನಗೆ ಯಾವುದೇ ಜೀವ ಭಯವಾಗದಂತೆ ರಕ್ಷಣೆ ನೀಡಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಬೆಳಗೆರೆ ಮಾತು ಆಲಿಸಿದ ನ್ಯಾಯಾಧೀಶರು ತಮ್ಮ ಆರೋಗ್ಯದ ಕುರಿತ ದಾಖಲೆಗಳನ್ನು ಜೈಲು ಅಧೀಕ್ಷಕರಿಗೆ ನೀಡಿ. ಜೈಲು ವೈದ್ಯಾಧಿಕಾರಿಗಳೇ ನಿಮ್ಮ ಆರೋಗ್ಯದ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruCrimeCCBಸಿಸಿಬಿಅಪರಾಧJudicial Custodyನ್ಯಾಯಾಂಗ ಬಂಧನRavi Belagere Arrestರವಿ ಬೆಳಗೆರೆ ಬಂಧನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


