ರವಿ ಬೆಳಗೆರೆ ಬೆಂಬಲಕ್ಕೆ ನಿಂತ 2 ನೇ ಪತ್ನಿ ಯಶೋಮತಿ: ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್
ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಪರವಾಗಿ ಅವರ 2 ನೇ ಪತ್ನಿ ಯಶೋಮತಿ ಫೇಸ್

Published On :
ಬೆಂಗಳೂರು: ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಪರವಾಗಿ ಅವರ 2 ನೇ ಪತ್ನಿ ಯಶೋಮತಿ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ಡೇಟ್ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಅಧಿಕಾರಿಗಳ ಎದುರು ಹೇಳಿಕೆ ನೀಡಿರುವ ಯಶೋಮತಿ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸುನಿಲ್ ಹಿರಿಯ ಸಂಪಾದಕರಾಗಿದ್ದರು. ನಾನು ಪತ್ರಿಕೆಯ ಎಂಡಿ ಆಗಿದ್ದೆ. ನಮ್ಮ ಕೆಲಸದ ಕುರಿತಾಗಿ ಮಾತ್ರ ನಾವು ಆಗಾಗ ಚರ್ಚೆ ನಡೆಸುತ್ತಿದ್ದೆವು. ಇದನ್ನು ಹೊರತು ಪಡಿಸಿ ವೈಯುಕ್ತಿಕವಾದ ಚರ್ಚೆಗಳನ್ನು ನಾವು ಮಾಡುತ್ತಿರಲಿಲ್ಲ ಎಂದು ಯಶೋಮತಿ ಹೇಳಿದ್ದಾರೆ. ಈ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್ ಮಾಡಿರುವ ಯಶೋಮತಿ “ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ” ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ. ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ" ಎಂದು ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


