ಬೆಂಗಳೂರು ಪೋಲೀಸ್ ಕಾರ್ಯಾಚರಣೆ, ತಮಿಳು ನಾಡಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟಗಾರರ ಬಂಧನ
ಪರಿಶುದ್ದತೆ ಹಾಗೂ ಸಾಂಪ್ರದಾಯಿಕ ಗುಣಮಟ್ಟಕ್ಕೆ ಹೆಸರಾದ ನಂದಿನಿ ತುಪ್ಪವನ್ನು ಕಲಬೆರೆಕೆ ಮಾಡಿ ಮಾರಾಟ ಮಾಡುತ್ತಿದ್ದ ತಂಡವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

Published On :
ಬೆಂಗಳೂರು: ಪರಿಶುದ್ದತೆ ಹಾಗೂ ಸಾಂಪ್ರದಾಯಿಕ ಗುಣಮಟ್ಟಕ್ಕೆ ಹೆಸರಾದ ನಂದಿನಿ ತುಪ್ಪವನ್ನು ಕಲಬೆರೆಕೆ ಮಾಡಿ ಮಾರಾಟ ಮಾಡುತ್ತಿದ್ದ ತಂಡವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿಯಲ್ಲಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಆಡುಗೋಡಿ ಪೋಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.ಹೈದರಾಬಾದ್ ನಿಂದ ತರಿಸಿದ ಯಂತ್ರದಿಂದ ನಕಲಿ ತುಪ್ಪ ತಯಾರು ಮಾಡುತ್ತಿದ್ದ ಮಣಿ ಹಾಗೂ ಆತನ ಸಹಚರರನ್ನು ಅವರು ಬಂಧಿಸಿದ್ದಾರೆ.
ಕಲಬೆರೆಕೆ ನಂದಿನಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಮಣಿ ನಂದಿನಿ ಬಾಕ್ಸ್, ಚಿಹ್ನೆ ಬಳಸಿಕೊಳ್ಳುತ್ತಿದ್ದರು. ಇದೀಗ ಮಹತ್ವದ ಕಾರ್ಯಾಚರಣೆ ನಡೆಸಿದ ಪೋಲೀಸರು ಬಂಧಿತರಿಂದ 800 ಲೀಟರ್ ನಕಲಿ ನಂದಿನಿ ತುಪ್ಪವನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bangalore policeಬೆಂಗಳೂರು ಪೊಲೀಸರುKrishnagiriಕೃಷ್ಣಗಿರಿNandini gheeadulterated gheeನಂದಿನಿ ತುಪ್ಪಕಲಬೆರಕೆ ತುಪ್ಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


