ತುಮಕೂರು: ಪ್ರವಾಸದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಮೂವರು ಶಿಕ್ಷಕರ ಅಮಾನತು
ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ....

Published On :
ತುಮಕೂರು: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರದ ಸರ್ಕಾರಿ ಪ್ರೌಢ ಶಾಲೆಯ ಮೂವರು ಶಿಕ್ಷಕರನ್ನು ಬುಧವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡ ಡಿಡಿಪಿಐ ರವಿಶಂಕರ ರೆಡ್ಡಿಯವರು ಮೂವರು ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕ ಸಚ್ಚಿದಾನಂದ ಹಾಗೂ ಶಿಕ್ಷಕರಾದ ಶೇಖ್ ಮುಜಾಮಿಲ್ ಹಾಗೂ ಧನ್‌ಸಿಂಗ್ ರಾಥೋಡ್ ಎಂಬವವರು ಪ್ರವಾಸದುದ್ದಕ್ಕೂ ಪಾನಮತ್ತರಾಗಿಯೇ ಇದ್ದರು. ಅಷ್ಟೇ ಅಲ್ಲ, ಬಾಯಾರಿದ್ದ ಮಕ್ಕಳು ಕುಡಿಯಲು ನೀರು ಕೇಳಿದಾಗ ನೀರಿನ ಬಾಟಲಿಯಲ್ಲಿ ಮದ್ಯ ಮಿಕ್ಸ್ ಮಾಡಿ ಕುಡಿಸಿ ನಾಚಿಕೆಗೇಡಿನ ವರ್ತನೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ.
ಹಾಸನದ ಬೇಲೂರು ಬಳಿ ಟೀ ಕುಡಿಯಲು ಬಸ್ ನಿಲ್ಲಿಸಿದ್ದ ವೇಳೆ ಶಿಕ್ಷಕರು ಈ ಕೃತ್ಯವನ್ನೆಸಗಿದ್ದಾರೆ ಎಂದು ತಿಳಿದು ಬಂದಿದ್ದು, ಮದ್ಯ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೆಲವರು ಪ್ರಜ್ಞೆ ಕಳೆದುಕೊಂಡರೆ ಮತ್ತೆ ಕೆಲವರು ವಾಂತಿ ಮಾಡಿಕೊಂಡಿದ್ದಾರೆ.
ಶಿಕ್ಷಕರ ಈ ಕೃತ್ಯಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡ ಡಿಡಿಪಿಐ ರವಿಶಂಕರ ರೆಡ್ಡಿಯವರು ಮೂವರು ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


