ನೃಪತುಂಗ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಆಯ್ಕೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.

Published On :
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.
ಪ್ರಶಸ್ತಿಯು ಏಳು ಲಕ್ಷದ ಒಂದು ರೂಪಾಯಿ ನಗದು, ಫಲಕ, ಪ್ರಶಸ್ತಿಪತ್ರ, ಸ್ಮರಣಿಕೆ ಒಳಗೊಂಡಿದೆ. ಹಿರಿಯ ಕವಿ ಬಿ.ಆರ್. ಲಕ್ಷ್ಮಣರಾವ್, ವಿದ್ವಾಂಸ ವೀರಣ್ಣ ರಾಜೂರ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಎ.ಎನ್. ಪ್ರಕಾಶಗೌಡ, ಕಾರ್ಮಿಕ ಕಲ್ಯಾಣಾಧಿಕಾರಿ ವಿಜಯಕುಮಾರ್ ರೈ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ. ಚನ್ನೇಗೌಡ ಒಳಗೊಂಡ ಆಯ್ಕೆ ಸಮಿತಿ ಭೈರಪ್ಪ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.
ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ: 45 ವರ್ಷದೊಳಗಿನ ಸಾಹಿತಿಗಳಿಗೆ ನೀಡುವ ‘ಮಯೂರ ವರ್ಮ ಪ್ರಶಸ್ತಿ’ಗೆ ರಾಮಲಿಂಗೇಶ್ವರ(ಸಿಸಿರಾ), ಸಿ. ನಂದಿನಿ, ಶಾಂತಿ ಕೆ. ಅಪ್ಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ₹ 25,000 ನಗದು ಪುರಸ್ಕಾರವನ್ನು ಒಳಗೊಂಡಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
kannada sahitya parishatಕನ್ನಡ ಸಾಹಿತ್ಯ ಪರಿಷತ್SL Bhyrappaಎಸ್ಎಲ್ ಭೈರಪ್ಪNrupatunga award-2017ನೃಪತುಂಗ ಪ್ರಶಸ್ತಿ-2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


