ರಾಜ್ಯ

ಸುಪಾರಿ ಪ್ರಕರಣ: ರವಿ ಬೆಳಗೆರೆ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ತಮ್ಮ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು....

ಸುಪಾರಿ ಪ್ರಕರಣ: ರವಿ ಬೆಳಗೆರೆ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ರವಿ ಬೆಳಗೆರೆ
Published On :
ಬೆಂಗಳೂರು: ತಮ್ಮ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರ ಮಧ್ಯಂತರ ಜಾಮೀನು ಅವಧಿಯನ್ನು ಡಿಸೆಂಬರ್ 18ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಕಳೆದ ಶನಿವಾರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರವಿ ಬೆಳಗೆರೆ ಅವರಿಗೆ ಸೆಷನ್ಸ್ ಕೋರ್ಟ್ ಡಿಸೆಂಬರ್ 16ರ ವರೆಗೆ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. 
ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಮತ್ತೆ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರದವರೆಗೆ ವಿಸ್ತರಿಸಿ ಆದೇಶ ನೀಡಿದೆ.
ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಜಯದೇಶ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.