ಪರಪ್ಪನ ಅಗ್ರಹಾರ ಅವ್ಯವಹಾರ: ಆರ್ ಟಿಐ ಅಡಿ ಮಾಹಿತಿ ಕೋರಿದ ಐಪಿಎಸ್ ಅಧಿಕಾರಿ ರೂಪ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರದ ಪ್ರಕರಣದ ತನಿಳೆ ಮಾಹಿತಿಯನ್ನು ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.

Published On :
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರದ ಪ್ರಕರಣದ ತನಿಳೆ ಮಾಹಿತಿಯನ್ನು ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.
ಜೈಲಿನಲ್ಲಿ ಲಂಚ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ರೂಪಾ ಅವರು ಎಸಿಬಿ ಗೆ ದೂರು ನೀಡಿದ್ದರು. ಆಗಸ್ಟ್ ನಲ್ಲಿ ಈ ಸಂಬಂಧ ದೂರು ದಾಖಲಿಸಿದ್ದರೂ ಸಹ ಇದುವರೆಗೆ ಪ್ರಕರಣದ ಬೆಳವಣಿಗೆ ಬಗೆಗೆ ಯಾವ ಮಾಹಿತಿಯೂ ಸಿಕ್ಕಿಲ್ಲ. ಇದಕ್ಕಾಗಿ ರೂಪ ಅವರು ಇದೀಗ ಈ ಸಂಬಂಧ ಮಾಹಿತಿ ನೀಡುವಂತೆ ಕೋರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಅವ್ಯವಹಾರ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು. ಇದನ್ನು ಬಯಲಿಗೆಳೆದ ರೂಪಾ ಸೇರಿದಂತೆ ಅನೇಕ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪರಪ್ಪನ ಅಗ್ರಹಾರRTIಆರ್ ಟಿಐIPS officer D. RoopaParappan AgraharParappan Agrahar Scandal Caseಐಪಿಎಸ್ ಅಧಿಕಾರಿ ಡಿ. ರೂಪಾಪರಪ್ಪನ ಅಗ್ರಹಾರ ಅವ್ಯವಹಾರ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


