ಸಂಸದ ಶ್ರೀರಾಮುಲು ದೆಹಲಿ ನಿವಾಸದಲ್ಲಿ ಬೆಂಕಿ ಅವಘಡ, ಮಕ್ಕಳಿಗೆ ಗಾಯ
ಬಿಜೆಪಿ ಸಂಸದ ಬಿ ಶ್ರೀರಾಮುಲು ಅವರ ದೆಹಲಿ ನಿವಾಸದಲ್ಲಿ ಕಳೆದ ರಾತ್ರಿ ಬೆಂಕಿ ಅವಘಢ ಸಂಭವಿಸಿದ್ದು, ಘಟನೆಯಲ್ಲಿ ಶ್ರೀರಾಮುಲು ಅವರ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Published On :
ನವದೆಹಲಿ: ಬಿಜೆಪಿ ಸಂಸದ ಬಿ ಶ್ರೀರಾಮುಲು ಅವರ ದೆಹಲಿ ನಿವಾಸದಲ್ಲಿ ಕಳೆದ ರಾತ್ರಿ ಬೆಂಕಿ ಅವಘಢ ಸಂಭವಿಸಿದ್ದು, ಘಟನೆಯಲ್ಲಿ ಶ್ರೀರಾಮುಲು ಅವರ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ದೆಹಲಿಯ ಫಿರೋಜ್ ಶಾ ರಸ್ತೆಯಲ್ಲಿರುವ ಸಂಸದ ಶ್ರೀರಾಮುಲು ನಿವಾಸದಲ್ಲಿ ತಡರಾತ್ರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಖಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲವಾದರೂ ಶ್ರೀರಾಮುಲು ಅವರ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಶ್ರೀರಾಮುಲು ಅವರ ಕುಟುಂಬ ಬೇರೆಡೆ ಸ್ಥಳಾಂತರವಾಗಿದ್ದು, ನಿವಾಸದಲ್ಲಿ ಅವಶೇಷಗಳ ತೆರವು ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಇನ್ನು ಅಧಿಕಾರಿಗಳು ಶಂಕಿಸಿರುವಂತೆ ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


