ರಾಜ್ಯ

ವಿಜಯಪುರ: ಶಾಲಾ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ, ಕೊಲೆ, ಇಬ್ಬರ ಬಂಧನ

ವಿಜಯಪುರದಲ್ಲಿ ಶಾಲೆಗೆ ತೆರಳುತ್ತಿದ್ದ ಒಂಭತ್ತನೇ ತರಗತಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ.......

ವಿಜಯಪುರ: ಶಾಲಾ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ, ಕೊಲೆ, ಇಬ್ಬರ ಬಂಧನ
ವಿಜಯಪುರ: ಶಾಲಾ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ, ಕೊಲೆ, ಇಬ್ಬರ ಬಂಧನ
Published On :
ವಿಜಯಪುರ: ವಿಜಯಪುರದಲ್ಲಿ ಶಾಲೆಗೆ ತೆರಳುತ್ತಿದ್ದ ಒಂಭತ್ತನೇ ತರಗತಿ ಬಾಲಕಿಯ ಮೇಲೆ  ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.
ವಿಜಯಪುರದ ಮಂಜುನಾಥ ನಗರದ ಮಲ್ಲಿಕಾರ್ಜುನ್ ಸ್ಕೂಲ್ ಬಳಿ ಅಪ್ರಾಪ್ತ ಬಾಲಕಿ ತೆರಳುತ್ತಿದ್ದಾಗ ಮೂವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕುತ್ತಿಗೆ ಹಿಸುಕಿ ಕೊಲೆಗೈದಿದ್ದಾರೆ. ಬಾಲಕಿಯು ದಾನಮ್ಮ ಎನ್ನುವವಳಾಗಿದ್ದು ದಲಿತ ಸಮುದಾಯಕ್ಕೆ ಸೇರಿದವಳೆನ್ನಲಾಗಿದೆ. 
ಕೈಲಾಶ್, ಸಾಗರ್ ಮೋರೆ, ದೀಪಕ್ ಇನ್ನೂ ಇಬ್ಬರು ಈ ಪ್ರಕರಣದಲ್ಲಿ ಭಾಗವಹಿಸಿದ್ದು  ಕೈಲಾಸ್ ಮತ್ತು ಸಾಗರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಬವಿಸಿದ್ದು ಘಟನೆಯನ್ನು ವಿರೋಧಿಸಿ ಬಾಲಕಿಯ ಪೋಷಕರು ಮತ್ತು ವಿವಿಧ ದಲಿತ ಪರ ಸಂಘಟನೆಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದವು.
ವಿಚಾರ ತಿಳಿದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ,ರಾಜ್ಯ ಜಲಸಂಪನ್ಮೂಲ ಸಚಿವ  ಎಂಬಿ ಪಾಟೀಲ್ ಇಂದು ಬೆಳಗ್ಗೆ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ವೈಯುಕ್ತಿಕವಾಗಿ 5 ಲಕ್ಷ ರೂ. ಹಾಗೂ ಸರ್ಕಾರದಿಂದ  8 ಲಕ್ಷ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ:
ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆಯ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೇಸ್ ಬುಕ್, ಟ್ವಿಟ್ಟರ್ ಗಳಲ್ಲಿ ಅನೇಕ ಯುವಕರು, ಸಂಘಟನೆಗಳ ಕಾರ್ಯಕರ್ತರು ತಾವು ಘಟನೆಯನ್ನು ಖಂಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.