ರಾಜ್ಯ

ಯಲಹಂಕ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಯಲಹಂಕ ಫ್ಲೈ ಓವರ್ ಮೇಲಿನಿಂದ ಕಾರು ಕೆಳಗೆ ಬಿದ್ದಿದ್ದು ಈ ಅಪಘಾತದಲ್ಲಿ ಮೂವರು ಗಂಭೀರವಾಗಿ...

ಯಲಹಂಕ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ
ಅಪಘಾತ
Published On :
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಯಲಹಂಕ ಫ್ಲೈ ಓವರ್ ಮೇಲಿನಿಂದ ಕಾರು ಕೆಳಗೆ ಬಿದ್ದಿದ್ದು ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 
ಯಲಹಂಕದ ಸಂತೆ ಸರ್ಕಲ್ ಬಳಿ ಬೆಳಗ್ಗೆ 4.30ರ ಸುಮಾರಿಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕಾರು 30 ಅಡಿ ಕೆಳಗಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ವರುಣ್ ಜೈನ್, ರಚಿತಾ ರೆಡ್ಡಿ ಮತ್ತು ಚೈತ್ರಾ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಕಾರು ದೇವನಹಳ್ಳಿ ಕಡೆಯಿಂದ ಬೆಂಗಳೂರಿನ ಕಡೆ ತೆರಳುತ್ತಿತ್ತು. ರಾಜಸ್ತಾನ ನೋಂದಣಿಯ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಿನಿಮಿಯ ರೀತಿಯಲ್ಲಿ ಫ್ಲೈಓವರ್ ನಿಂದ ಕೆಳಗೆ ಬಿದ್ದಿದೆ. 
ಅಪಘಾತದಲ್ಲಿ ಗಾಯಗೊಂಡಿರುವ ಮೂವರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ಕೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.