ಅವಧಿಗೂ ಮುನ್ನ ಖಾಸಗಿ ಶಾಲಾ ಪ್ರವೇಶ ಕಾನೂನು ಬಾಹಿರ
ಅವಧಿಗೂ ಮೊದಲೇ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲಾತಿ ನಡೆಸಿದರೆ ಅದನ್ನು ಕಾನೂನು ಬಾಹಿರ ದಾಖಲಾತಿ ಎಂದು ಘೋಷಿಸಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು...

Published On :
ಬೆಂಗಳೂರು: ಅವಧಿಗೂ ಮೊದಲೇ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲಾತಿ ನಡೆಸಿದರೆ ಅದನ್ನು ಕಾನೂನು ಬಾಹಿರ ದಾಖಲಾತಿ ಎಂದು ಘೋಷಿಸಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಬುಧವಾರ ಹೇಳಿದ್ದಾರೆ.
ಮುಂದಿನ ವರ್ಷ ಮಾಡಿಕೊಳ್ಳಬೇಕಿರುವ ದಾಖಲಾತಿಗಳನ್ನು ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳು ಪ್ರಸಕ್ತ ವರ್ಷದಲ್ಲೇ ಮಾಡಿಕೊಳ್ಳುತ್ತಿದ್ದು, ಕೆಲ ಶಾಲೆಗಳು ಈಗಾಗಲೇ ಮಕ್ಕಳ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿವೆ ಎಂದು ಕೆಲ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.
ಪೋಷಕರ ದೂರುಗಳ ಹಿನ್ನಲೆಯಲ್ಲಿ ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳ ಮೇಲೆ ನಿಯಂತ್ರಣ ಹೇರಲು ಸರ್ಕಾರ ಮುಂದಾಗಿದೆ.
ಶಿಕ್ಷಣ ಇಲಾಖೆ ಹೊರಡಿಸಿರುವ ಹೊಸ ನಿಯಮದ ಪ್ರಕಾರ ಮುಂದಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡುವವರೆಗೂ ರಾಜ್ಯದಲ್ಲಿರುವ ಶಾಲೆಗಳು ಮಕ್ಕಳ ದಾಖಲಾತಿ ಪ್ರಕ್ರಿಯೆಗಳನ್ನು ಆರಂಭಿಸುವಂತಿಲ್ಲ.
ಸಾಮಾನ್ಯವಾಗಿ ಶಿಕ್ಷಣ ಇಲಾಖೆ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಏಪ್ರಿಲ್ ತಿಂಗಳ ಅಂತಿಮ ವಾರ ಅಥವಾ ಮೇ ತಿಂಗಳ ಮೊದಲ ವಾರದಂದು ಬಿಡುಗಡೆ ಮಾಡುತ್ತದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು, ಅವಧಿಗೂ ಮುನ್ನವೇ ಶಾಲೆಗಳು ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಅವಧಿಗೂ ಮುನ್ನು ಮಾಡಿಕೊಳ್ಳಲಾಗಿರುವ ದಾಖಲಾತಿಗಳನ್ನು ಕಾನೂನು ಬಾಹಿರವಾಗಿಸಿುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಹೇಳಿದ್ದಾರೆ.
ಶಾಲೆಗಳಲ್ಲಿ ಶುಲ್ಕ ಪಟ್ಟಿ ಪ್ರಕಟಿಸುವುದನ್ನು ಕಡ್ಡಾಯ ಮಾಡಲಾಗುತ್ತದೆ. ಮನಬಂದಂತೆ ಶುಲ್ಕ ನಿಗದಿ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ನಿಯಮಾವಳಿಗಳನ್ನು ರೂಪಿಸಿ 2018-19ನೇ ಸಾಲಿನಿಂದಲೇ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
ಸರ್ಕಾರದ ನಿಯಮವಾಳಿಗಳನ್ನು ಆಧರಿಸಿಯೇ ಖಾಸಗಿ ಶಾಲೆಗಳು, ಶುಲ್ಕ ನಿಗದಿ ಮಾಡಬೇಕು. ತರಗತಿವಾರು ಶುಲ್ಕದ ವಿವರವನ್ನು ಶಾಲೆಗಳ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಕಡ್ಡಾಯ. ಪ್ರಕಟಿಸದ ಶಾಲೆಗಳ ವಿರುದ್ದ ದೂರು ನೀಡಲು ಪೋಷಕರಿಗೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


