ಡಿ.25ರೊಳಗೆ ಸನ್ನಿ ಕಾರ್ಯಕ್ರಮದ ಬಗ್ಗೆ ನಿರ್ಧರಿಸಿ: ಪೊಲೀಸರಿಗೆ 'ಹೈ' ಸೂಚನೆ
ಡಿಸೆಂಬರ್ 31ರ ರಾತ್ರಿ ಮಾಜಿ ನೀಲಿ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷಾಚರಣೆ....

Published On :
ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಮಾಜಿ ನೀಲಿ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಕುರಿತು ಆಯೋಜಕರು ಸಲ್ಲಿಸಿರುವ ಮನವಿಯನ್ನು ಡಿಸೆಂಬರ್ 25ರೊಳಗೆ ಪರಿಗಣಿಸುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರಿಗೆ ನಿರ್ದೇಶನ ನೀಡಿದೆ.
ಸನ್ನಿ ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ ಪೊಲೀಸರ ವಿರುದ್ಧ ಕಾರ್ಯಕ್ರಮ ಆಯೋಜ ಸಂಸ್ಥೆ ಟೈಮ್ಸ್ ಕ್ರಿಯೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸನ್ನಿ ಲಿಯೋನ್ ರಸಮಂಜರಿ ಕಾರ್ಯಕ್ರಮಕ್ಕೆ ಏಕೆ ಅಡ್ಡಿ ಮಾಡುತ್ತಿದ್ದೀರಿ ಎಂದು ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡರು.
ಕಾನೂನು ಸುವ್ಯವಸ್ಥೆ ಪಾಲನೆಗೆ ಏನು ಕ್ರಮ ಕೈಗೊಂಡಿದ್ದೀರಿ?, ನಗರದಲ್ಲಿ ಇಂತಹ ಬೇರೆ ಕಾರ್ಯಕ್ರಮ ಹೊಸ ವರ್ಷದ ವೇಳೆ ನಡೆಯಲು ಅನುಮತಿ ಕೊಟ್ಟಿದ್ದರೆ ಅವುಗಳ ವಿವರ ಕೊಡಿ ಎಂದು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಬೇರೆ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವಾಗ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಏಕೆ ಕೊಡುತ್ತಿಲ್ಲ. ಸರ್ಕಾರದ ತಾರತಮ್ಯ ಸರಿಯಿಲ್ಲ. ಬೇರೆ ಕಾರ್ಯಕ್ರಮಗಳಿಗೆ ನೀಡಿರುವ ಅನುಮತಿ ರದ್ದುಪಡಿಸಲೇ? ಎಂದು ಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಕೋರಿ ಆಯೋಜಕರು ಸಲ್ಲಿಸಿರುವ ಮನವಿ ಪತ್ರವನ್ನು ಡಿ.25ರೊಳಗೆ ಕಾನೂನಿನಡಿ ಪರಿಶೀಲಿಸಿ ಆದೇಶ ಹೊರಡಿಸಬೇಕು ಎಂದು ಸೂಚಿಸಿದೆ.
ಯಾರೊ ಕೆಲವು 10 ಜನ ಪ್ರತಿಭಟನೆ ಮಾಡಿದರು ಎಂಬ ಒಂದೇ ಕಾರಣಕ್ಕೆ ಪೊಲೀಸರು ಮೌಖಿಕವಾಗಿ ಅನುಮತಿ ನಿರಾಕರಿಸಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರ ಪರ ವಕೀಲ ಉದಯ ಹೊಳ್ಳ ಅವರು ವಾದ ಮಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


