ರಾಜ್ಯ

ಹತ್ಯೆಯಾದ ಬಿಜೆಪಿ ನಾಯಕ ಯೋಗೇಶ್ ಪತ್ನಿ ಮಲ್ಲಮ್ಮ ಕಾಂಗ್ರೆಸ್'ಗೆ ಸೇರ್ಪಡೆ

ಹತ್ಯೆಗೀಡಾಗಿದ್ದ ಬಿಜೆಪಿ ನಾಯಕ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ...

ಹತ್ಯೆಯಾದ ಬಿಜೆಪಿ ನಾಯಕ ಯೋಗೇಶ್ ಪತ್ನಿ ಮಲ್ಲಮ್ಮ ಕಾಂಗ್ರೆಸ್'ಗೆ ಸೇರ್ಪಡೆ
ಹತ್ಯೆಯಾದ ಬಿಜೆಪಿ ನಾಯಕ ಯೋಗೇಶ್ ಪತ್ನಿ ಮಲ್ಲಮ್ಮ ಕಾಂಗ್ರೆಸ್'ಗೆ ಸೇರ್ಪಡೆ
Published On :
ಬೆಳಗಾವಿ: ಹತ್ಯೆಗೀಡಾಗಿದ್ದ ಬಿಜೆಪಿ ನಾಯಕ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. 
ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೇತೃತ್ವದಲ್ಲಿ ಮಲ್ಲಮ್ಮ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. 
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿರುವ ಮಲ್ಲಮ್ಮ ಅವರು, ನನ್ನ ಮೇಲೆ ಯಾರೂ ಒತ್ತಡ ಹೇರಿಲ್ಲ. ಸ್ವಯಂಕೃತವಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆಂದು ಹೇಳಿದ್ದಾರೆ. 
ಬಿಜೆಪಿ ನಾಯಕರು ಕೆಟ್ಟ ರಾಜಕೀಯ ನಾನು ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುವಂತೆ ಮಾಡಿತು. ನನ್ನ ಪತಿಯ ಹತ್ಯೆ ಪ್ರಕರಣವನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿತು. ಪತಿಯ ಸಾವಿಟ್ಟುಕೊಂಡು ರಾಜಕಾರಣ ಮಾಡುವುದು ನನಗೆ ಇಷ್ಟವಿರಲಿಲ್ಲ. ಪತಿ ಯೋಗೇಶ್ ಗೌಡ ಅವರು ಅರ್ಧಕ್ಕೆ ನಿಲ್ಲಿಸಿದ್ದ ಕೆಲಸವನ್ನು ಪೂರ್ಣಗೊಳಿಸುವುದು ನನ್ನ ಆದ್ಯತೆ. ಮಕ್ಕಳ ಭವಿಷ್ಯವೂ ನನಗೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಪತಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 
ಮಲ್ಲಮ್ಮ ಅವರು ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡಿದ್ದು, ಜಿಲ್ಲಾ ಸಚಿವ ವಿನಯ್ ಕುಲಕರ್ಣಿಯವರನ್ನು ರಕ್ಷಣೆ ಮಾಡುವ ಸಲುವಾಗಿ ಮಲ್ಲಮ್ಮ ಅವರ ಮೇಲೆ ಕಾಂಗ್ರೆಸ್ ನಾಯಕರು ತೀವ್ರ ಒತ್ತಡ ಹೇರಿದ್ದಾರೆ ಇದರಿಂದಾಗಿ ಕಾಂಗ್ರೆಸ್'ಗೆ ಸೇರ್ಪಡೆಗೊಂಡಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.