ರಾಜ್ಯ

ಒಮ್ಮತವಿದ್ದರೆ ಮಾತ್ರ ಬೆಳಗಾವಿ ವಿಭಜನೆ: ಸಿಎಂ ಸಿದ್ದರಾಮಯ್ಯ

ಕನ್ನಡಪರ ಸಂಘಟನೆಗಳು, ಮಠಾಧೀಶರು ಹಾಗೂ ಜನಪ್ರತಿನಿಧಿಗಳ ಒಮ್ಮತದಿಂದ ನಿರ್ಧಾರ ಕೈಗೊಂಡರೆ ಮಾತ್ರ ಬೆಳಗಾವಿ ವಿಭಜಿಸಿ ಗೋಕಾಕ್ ಹಾಗೂ ಚಿಕ್ಕೋಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನವನ್ನು ನೀಡುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಒಮ್ಮತವಿದ್ದರೆ ಮಾತ್ರ ಬೆಳಗಾವಿ ವಿಭಜನೆ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಳಗಾವಿ: ಕನ್ನಡಪರ ಸಂಘಟನೆಗಳು, ಮಠಾಧೀಶರು ಹಾಗೂ ಜನಪ್ರತಿನಿಧಿಗಳ ಒಮ್ಮತದಿಂದ ನಿರ್ಧಾರ ಕೈಗೊಂಡರೆ ಮಾತ್ರ ಬೆಳಗಾವಿ ವಿಭಜಿಸಿ ಗೋಕಾಕ್ ಹಾಗೂ ಚಿಕ್ಕೋಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನವನ್ನು ನೀಡುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. 
ಶೂನ್ಯ ಸಂಪಾದನಾ ಮಠದ ಮುರುಗರಾಜೇಂದ್ರ ಸ್ವಾಮಿ ನೇತೃತ್ವದ ನಿಯೋಗ ಚಿಕ್ಕೋಡಿ ಹಾಗೂ ಗೋಕಾಕ್'ಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡುವಂತೆ ಕೋರಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. 
ಮನವಿ ಪತ್ರವನ್ನು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೋಕಾಕ್'ಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡುವುದರ ವಿರುದ್ಧ ನಮ್ಮ ಸರ್ಕಾರವಿಲ್ಲ. ಕರ್ನಾಟಕ ಹಾಗೂ ಬೆಳಗಾವಿ ಗಡಿ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ವಿವಾದ ಇತ್ಯರ್ಥಗೊಳ್ಳುವವರೆಗೂ ಬೆಳಗಾವಿ ವಿಭಜನೆಯಾಗಬಾರದೆಂದು ಕೆಲ ಸಂಘಟನೆಗಳು ಆಗ್ರಹಿಸುತ್ತಿವೆ. ಕನ್ನಡಪರ ಸಂಘಟನೆಗಳು, ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಒಮ್ಮತ ನಿರ್ಧಾರ ತೆಗೆದುಕೊಂಡರೆ ಮಾತ್ರ ಗೋಕಾಕ್ ಹಾಗೂ ಚಿಕ್ಕೋಡಿಗೆ ಪ್ರತ್ಯೇಕ ಜಿಲ್ಲಾ ಸ್ಥಾನಮಾನವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.