ವಿಜಯಪುರ ಅತ್ಯಾಚಾರ, ಕೊಲೆ ಪ್ರಕರಣ: 4 ಮಂದಿ ಬಂಧನ
ಶಾಲಾ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಶುಕ್ರವಾರ ಓರ್ವ ಅಪ್ರಾಪ್ತ ಬಾಲಕ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

Published On :
ವಿಜಯಪುರ: ಶಾಲಾ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಶುಕ್ರವಾರ ಓರ್ವ ಅಪ್ರಾಪ್ತ ಬಾಲಕ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿರುವ ಸಿಐಡಿ ಎಸ್'ಪಿ ಹೆಚ್.ಡಿ. ಆನಂದ್ ಕುಮಾರ್ ಅವರು, ಪ್ರಾಥಮಿಕ ಮಾಹಿತಿಯಲ್ಲಿರುವ ಪ್ರಕಾರ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ನಿಜ. ಸಾಮೂಹಿಕ ಅತ್ಯಾಚಾರ ನಡೆದಿದೆಯೋ ಇಲ್ಲವೋ? ಈಗಾಲೇ ಹೇಳುವುದು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಎಲ್ಲವೂ ತಿಳಿಯಲಿದೆ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಪ್ರಾಪ್ತ ಬಾಲಕ ಸೇರಿದಂತೆ, ಸಾಗರ ಮೋರೆ, ಶ್ರೀಶೈಲ ಮುಚ್ಚಂಡಿ, ಕೈಲಾಸ ರಾಥೋಡ ಬಂಧಿತರಾಗಿದ್ದಾರೆ. ಇವರೆಲ್ಲರೂ ವಿಜಯಪುರ ನಗರದ ದರ್ಗಾ ಬಡಾವಣೆಯವರಾಗಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


