ದಾವಣಗೆರೆ: ಪ್ರಿಯತಮೆ ವಿಷ ಕುಡಿದಳೆಂದು ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಯುವಕ
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On :
ದಾವಣಗೆರೆ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..
ಹೊನ್ನಾಳಿಯ ಕಮಲಾಪುರ ಗ್ರಾಮದ ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು ಈತ ಅದೇ ಗ್ರಾಮದ ರಂಜಿತಾ ಎನ್ನುವ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇವರಿಬ್ಬರ ಪ್ರೇಮದ ಕುರಿತು ಮನೆಯಲ್ಲಿ ವಿರೋಧವಿತ್ತು.
ಆಗ ರಂಜಿತಾ ಮನೆಯವರು ಆಕೆಗೆ ಬೇರೆ ಮದುವೆ ಮಾಡಲು ಸಜ್ಜಾಗಿದ್ದರು. ಆದರೆ ಮಹೇಶ್ ಮಾತ್ರ ಅವಳನ್ನು ಬಿಟ್ಟಿರಲಾರದಾದ. ಇಬ್ಬರೂ ಹಾವೇರಿ ಜಿಲ್ಲೆ ರಾಣಿಬೆನ್ನೂರಿಗೆ ಪಲಾಯನಗೈದರು. ಅಲ್ಲಿ ಕೆಲ ಕಾಲ ಒಟ್ಟಿಗೇ ಇದ್ದ ಅವರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಆಗುತ್ತಿತ್ತು. ಆದರೆ ಎರಡು ದಿನಗಳ ಹಿಂದೆ ಜಗಳ ವಿಕೋಪಕ್ಕೆ ತಿರುಗಿ ರಂಜಿತಾ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಗ ಮಹೇಶ್ ಆಕೆಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದನು.
ಇಂದು ಆಸ್ಪತ್ರೆಯಿಂದ ರಂಜಿತಾ ಡಿಸ್ಚಾರ್ಜ್ ಆಗುವವಳಿದ್ದು ಇನ್ನು ಆಕೆ ನನಗೆ ದೊರಕುವುದಿಲ್ಲ ಎಂದು ಖೇದಗೊಂಡ ಮಹೇಶ್ ಆತ್ಮಹತ್ಯೆ ಪ್ರಕರಣ ಸಹ ನನ್ನ ಮೇಲೆ ಬರಲಿದೆ ಎನ್ನುವ ಭೀತಿಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ದಾವಣಗೆರೆ ಪೋಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


