ನಮ್ಮ ಬೆಂಗಳೂರು ಹಬ್ಬ: 'ಬ್ರ್ಯಾಂಡ್ ಬೆಂಗಳೂರು' ಲೋಗೋ ಅನಾವರಣಕ್ಕೆ ಕ್ಷಣಗಣನೆ ಆರಂಭ
ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ, ಇನ್ನಷ್ಟು ಜನಪ್ರಿಯಗೊಳಿಸುವ ಸಲುವಾಗಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ..........

Published On :
ಬೆಂಗಳೂರು: ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ, ಇನ್ನಷ್ಟು ಜನಪ್ರಿಯಗೊಳಿಸುವ ಸಲುವಾಗಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಕಾರ್ಯತಂತ್ರ ರೂಪಿಸಿದೆ. ಇದಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ರೀತಿಯ ಕಾರ್ಯಕ್ರಮ ರೂಪಿಸಲಾಗಿದ್ದು ನ್ಯೂಯಾರ್ಕ್, ಲಂಡನ್, ಮೆಲ್ಬೋರ್ನ್ ಗಳಂತೆ ಬೆಂಗಳೂರಿಗೂ ಪ್ರತ್ಯೇಕ ಲೋಗೋ ಬಿಡುಗಡೆ ಮಾಡಲು ಸಿದ್ದತೆ ನಡೆದಿದೆ.
ಇಂದು ವಿಧಾನಸೌಧದ ಮುಂಭಾಗ ನಡೆಯಲಿರುವ ನಮ್ಮ ಬೆಂಗಳೂರು ಹಬ್ಬದಲ್ಲಿ ಈ ಲೋಗೋ ಬಿಡುಗಡೆಯಾಗಲಿದೆ. ಜಾಗತಿಕ ಪ್ರವಾಸೋದ್ಯಮ ನಕಾಶೆಯಲ್ಲಿ ಬೆಂಗಳೂರಿಗೆ ತನ್ನದೇ ಪ್ರಾಮುಖ್ಯತೆ ಇದ್ದು ಅದನ್ನು ಇನ್ನಷ್ಟು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯು ಬ್ರ್ಯಾಂಡ್ ಬೆಂಗಳೂರು ಲೋಗೋ ತಯಾರಿಸಿದೆ.
ಇಲಾಖೆ ವತಿಯಿಂದ ಇಂದು ವಿಧಾನಸೌಧದ ಆವರಣದಲ್ಲಿ 'ನಮ್ಮ ಬೆಂಗಳೂರು ಹಬ್ಬ’ ಆಯೋಜನೆಗೊಂಡಿದ್ದು ಬೆಳಗ್ಗೆಯಿಂದ ಸಂಜೆವರೆಗೆ ವಿಧಾನಸೌಧದ ಆವರಣವು ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಈ ದಿನದ ಮಟ್ಟಿಗೆ ವಿಧಾನಸೌಧ ಮುಂಭಾಗದ ರಸ್ತೆಯು ಪಾದಚಾರಿಗಳಿಗೆ ಮಾತ್ರ ಸೀಮಿತವಾಗಲಿದ್ದು, ‘ಓಪನ್ ಸ್ಟ್ರೀಟ್’' ನ ಎರಡೂ ಬದಿಗಳಲ್ಲಿ ಸ್ಥಳೀಯ ಕಲೆಗಳ ಪ್ರದರ್ಶನ, ಫುಡ್ ಕೋರ್ಟ್, ಚಲನಚಿತ್ರ ಪ್ರದರ್ಶನ ಮೊದಲಾದ ಮನರಂಜನಾ ಕಾರ್ಯಕ್ರಮಗಳು ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬ್ರ್ಯಾಂಡ್ ಬೆಂಗಳೂರುBrand BangaloreNamma Bengaluru Habbatate tourism departmentBrand Bangalore logoನಮ್ಮ ಬೆಂಗಳೂರು ಹಬ್ಬರಾಜ್ಯ ಪ್ರವಾಸೋದ್ಯಮ ಇಲಾಖೆಬ್ರ್ಯಾಂಡ್ ಬೆಂಗಳೂರು ಲೋಗೋ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


