ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸರ್ಕಾರ ಪ್ರೋತ್ಸಾಹ: ಕೃಷ್ಣ ಭೈರೇಗೌಡ
ರಾಜ್ಯದಲ್ಲಿ 14 ಒಕ್ಕೂಟಗಳ ಮೂಲಕ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ...

Published On :
ಮಂಗಳೂರು: ರಾಜ್ಯದಲ್ಲಿ 14 ಒಕ್ಕೂಟಗಳ ಮೂಲಕ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಉದ್ಯಾನದಲ್ಲಿ ನಿನ್ನೆ ಎರಡು ದಿನಗಳ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳ ಪ್ರದರ್ಶನ ಮತ್ತು ವಾಣಿಜ್ಯ ಮೇಳ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಿರಿಧಾನ್ಯ ಮತ್ತು ಸಾವಯವ ಆಹಾರ ಬಳಕೆ ಮಹತ್ವ ಕುರಿತು ಅರಿವು ಮೂಡಿಸುವ ಮೂಲಕ ರೈತರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮುಂದಿನ ತಿಂಗಳ 19ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತಿದೆ, ಬೃಹತ್ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ರೈತ ದಿನಾಚರಣೆ ಅಂಗವಾಗಿ ಬೀದರ್‍ನಲ್ಲಿಂದು ಜಿಲ್ಲಾ ಸಾವಯವ ಕೃಷಿ ಸಮ್ಮೇಳನ ಮತ್ತು ಸಿರಿಧಾನ್ಯ ಮೇಳ ಏರ್ಪಾಡಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಗಳು ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಸಿರಿಧಾನ್ಯ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಚಿಂತನೆ ಇದೆ. ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ತೊಗರಿ ಬೆಳೆಗೆ ಬೆಂಬಲ ಬೆಲೆ ನೀಡಲಾಗುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


