ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಕಾನೂನು ಜಾರಿಗೆ ಸರ್ಕಾರ ಚಿಂತನೆ: ರಾಮಲಿಂಗಾ ರೆಡ್ಡಿ
12 ವರ್ಷ ಮತ್ತು ಅದಕ್ಕಿಂತ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ....

Published On :
ಬೆಂಗಳೂರು: 12 ವರ್ಷ ಮತ್ತು ಅದಕ್ಕಿಂತ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಇತ್ತೀಚೆಗೆ ಮಧ್ಯ ಪ್ರದೇಶ ವಿಧಾನಸಭೆ ಜಾರಿಗೆ ತಂದ ಮಸೂದೆಯನ್ನು ಅನುಸರಿಸಲು ಕರ್ನಾಟಕ ಮುಂದಾಗಿದೆ.
ಇಂತಹದೇ ಕಾನೂನನ್ನು ಜಾರಿಗೆ ತಂದು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವವರಿಗೆ ಉಗ್ರ ಶಿಕ್ಷೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
12 ವರ್ಷ ಮತ್ತು ಅದಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನು ಮಧ್ಯ ಪ್ರದೇಶ ವಿಧಾನಸಭೆ ಕಳೆದ ಡಿಸೆಂಬರ್ 4ರಂದು ಅನುಮೋದನೆ ಮಾಡಿತ್ತು. ಈ ಮೂಲಕ ಇಂತಹ ಮಸೂದೆ ಜಾರಿ ತಂದ ಮೊದಲ ರಾಜ್ಯ ಮಧ್ಯ ಪ್ರದೇಶವಾಗಿತ್ತು. ಮಧ್ಯ ಪ್ರದೇಶ ವಿಧಾನಸಭೆ ಜಾರಿಗೆ ತಂದ ಮಸೂದೆಯ ವಿವರಗಳನ್ನು ಕರ್ನಾಟಕ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಲಿದೆ ಎಂದರು.
ವಿಜಯಪುರದಲ್ಲಿ ಇತ್ತೀಚೆಗೆ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿದ ಅವರು ಇಂತಹ ಕಠಿಣ ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತಂದರೆ ಕೇಡಿಗಳಿಗೆ ಭಯವುಂಟಾಗಿ ಅಪರಾಧ ಪ್ರಕರಣಗಳು ಕಡಿಮೆಯಾಗಬಹುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


