ರಾಜ್ಯ

ಬೆಂಗಳೂರು: ಸಾಲ ಬಾಧೆಯಿಂದ ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣು

ಸಾಲವನ್ನು ಹಿಂತಿರುಗಿಸಲಾಗದೆ ನವ ವಿವಾಹಿತ ದಂಪತಿ ನೇಣು ಬಿಗಿದು ಆತ್ಮಹತ್ಯೆ ....

ಬೆಂಗಳೂರು: ಸಾಲ ಬಾಧೆಯಿಂದ ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಸಾಲವನ್ನು ಹಿಂತಿರುಗಿಸಲಾಗದೆ ನವ ವಿವಾಹಿತ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿಯ ಮೈಲಸಂದ್ರದಲ್ಲಿ ಕಳೆದ ರಾತ್ರಿ ನಡೆದಿದೆ. ಹುಡುಗಿಯ ತಾಯಿ ಇಂದು ಬೆಳಗ್ಗೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೃತ ದಂಪತಿಯನ್ನು 24 ವರ್ಷದ ಪ್ರವೀಣ್ ಮತ್ತು ಆತನ ಪತ್ನಿ 19 ವರ್ಷದ ಪ್ರಿಯಾ ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ಪ್ರವೀಣ್ ಬೆಂಗಳೂರಿನ ಉತ್ತರಹಳ್ಳಿಯ ಪ್ರಿಯಾಳನ್ನು ಎರಡು ತಿಂಗಳ ಹಿಂದೆ ವಿವಾಹವಾಗಿದ್ದನು. ಕೆಂಗೇರಿ ಸ್ಯಾಟಲೈಟ್ ಬಸ್ ನಿಲ್ದಾಣ ಹತ್ತಿರ ಉಪಾಹಾರ ಅಂಗಡಿಯನ್ನು ಪ್ರವೀಣ್ ನಡೆಸುತ್ತಿದ್ದನು.
 ನಿನ್ನೆ ತಡರಾತ್ರಿ ತಮ್ಮ ಮನೆಯ ಕೋಣೆಯಲ್ಲಿ ಒಳಗಿನಿಂದ ಬಾಗಿಲಿನ ಚಿಲಕ ಹಾಕಿ ದಂಪತಿ ನೇಣು ಬಿಗಿದಿದ್ದಾರೆ. ಇಂದು ಬೆಳಗ್ಗೆಯಿಂದ ಪ್ರಿಯಾ ತಾಯಿ ಒಂದೇ ಸಮನೆ ಫೋನ್ ಗೆ ಕರೆ ಮಾಡುತ್ತಿದ್ದರೂ ಕೂಡ ಆ ಕಡೆಯಿಂದ ಪ್ರತಿಕ್ರಿಯೆ ಬಾರದಿದ್ದಾಗ ಮನೆಗೆ ಬಂದು ಬಾಗಿಲು ಬಡಿದರು. ಆದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಕಿಟಕಿ ಮೂಲಕ ಇಣುಕಿ ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡುಬಂತು. 
ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳಿಂದ ಪ್ರವೀಣ್ ಮದುವೆಗಾಗಿ ಸಾಲ ತೆಗೆದುಕೊಂಡಿದ್ದರು. ಅದನ್ನು ಹಿಂತಿರುಗಿಸಲು ಕಷ್ಟವಾಗಿತ್ತು. ಇದರಿಂದ ನೊಂದು ಈ ಕ್ರಮ ತೆಗೆದುಕೊಂಡಿದ್ದಾರೆ.
ಎರಡೂ ಕುಟುಂಬ ಸದಸ್ಯರಿಂದ ಹೇಳಿಕೆ ಪಡೆದುಕೊಂಡಿದ್ದು, ಇಬ್ಬರ ನಡುವೆ ಯಾವುದೇ ಜಗಳ, ಭಿನ್ನಾಭಿಪ್ರಾಯಗಳಿರಲಿಲ್ಲ. ಮೃತದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಆಸ್ಪತ್ರೆಗೆ ಶವ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.ಕೆಂಗೇರಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.