ಮಹದಾಯಿ ನೀರು ಹಂಚಿಕೆ: ಬೆಂಗಳೂರಿನ ಬಿಜೆಪಿ ಕಚೇರಿಯೆದುರು ಮುಂದುವರಿದ ರೈತರ ಪ್ರತಿಭಟನೆ
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಬಿಜೆಪಿ ಕಚೇರಿ ಎದುರು ರೈತರು ...

Published On :
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಬಿಜೆಪಿ ಕಚೇರಿ ಎದುರು ರೈತರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವಾದ ನಿನ್ನೆ ಕೂಡ ಮುಂದುವರಿಯಿತು. ಗದಗ, ಬಾಗಲಕೋಟೆ, ಹುಬ್ಬಳ್ಳಿ ಮತ್ತು ಇತರ ಭಾಗಗಳ ರೈತರು ಬೆಂಗಳೂರಿಗೆ ಆಗಮಿಸಿ ತಮ್ಮ ಭಾಗಗಳಿಗೆ ಮಹಾದಾಯಿ ನೀರು ಹರಿಸುವಂತೆ ಒತ್ತಾಯ ಮಾಡಿದರು. ಮೊನ್ನೆ ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿದ ರೈತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಜೊತೆ ಸಮಸ್ಯೆಗಳ ಬಗ್ಗೆ ಚರ್ಚಿಸದಿದ್ದರೆ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ.
ಬಿಜೆಪಿಯ ರಾಜ್ಯ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿರುವ ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗುವ ನಿರೀಕ್ಷೆಯಿದೆ. ಕರ್ನಾಟಕ ರೈತ ಸೇನೆ ಬ್ಯಾನರ್ ನಲ್ಲಿ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವ ರೈತರು, ಕಳೆದೆರಡು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಜನನಾಯಕರು ಕಿವುಡರಂತೆ ವರ್ತಿಸುತ್ತಿದ್ದಾರೆ. ನೀರಿಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಪ್ರತಿಭಟನೆprotestfarmersರೈತರುಬಿಜೆಪಿ ಕಚೇರಿMahadayi water rowBjp officeಮಹದಾಯಿ ನದಿ ನೀರು ಹಂಚಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


