'ಸನ್ನಿ ನೈಟ್ ಇನ್ ಬೆಂಗಳೂರು' ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು
ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ಹೊಸ ವರ್ಷಾಚಣೆ ವೇಳೆ ನಗರದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ 'ಸನ್ನಿ ನೈಟ್ ಇನ್ ಬೆಂಗಳೂರು' ಕಾರ್ಯಕ್ರಮಕ್ಕ ಅನುಮತಿ ನೀಡದಿರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ...

Published On :
ಬೆಂಗಳೂರು: ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ಹೊಸ ವರ್ಷಾಚಣೆ ವೇಳೆ ನಗರದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ 'ಸನ್ನಿ ನೈಟ್ ಇನ್ ಬೆಂಗಳೂರು' ಕಾರ್ಯಕ್ರಮಕ್ಕ ಅನುಮತಿ ನೀಡದಿರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.
ಈ ಕುರಿತಂತೆ ಈಶಾನ್ಯ ವಿಭಾಗದ ಡಿಸಿಪಿ ಎಸ್.ಗಿರೀಶ್ ಅವರು ಕಾರ್ಯಕ್ರಮ ಆಯೋಜಿಸಲು ಮುಂದಾಗಿರುವ ಟೈಮ್ಸ್ ಕ್ರಿಯೇಷನ್ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್ ಹರೀಶ್ ಅವರಿಗೆ ಪತ್ರ ಬರೆದಿದ್ದು, ಪತ್ರತದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಸಮಾರಂಭಕ್ಕೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಿಕೊಳ್ಳದ ಹಿನ್ನಲೆಯಲ್ಲಿ ಅನುಮತಿ ನೀಡಲು ಸಾಧ್ಯವಿಲ್ಲ. ಅಲ್ಲದೆ, ಈ ಹಿಂದೆ ಸನ್ನಿ ಲಿಯೋನ್ ಅವರು ಕೇರಳಗೆ ಬಂದಾಗ ನೂಕುನುಗ್ಗಲು ಉಂಟಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿತ್ತು. ಹೀಗಾಗಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮ ಆಯೋಜಕರು ಈ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು. ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ಹಾಗೂ ನಗರ ಪೊಲೀಸ್ ಆಯುಕ್ತರಿಗೆ, ಈಶಾನ್ಯ ವಲಯದ ಡಿಸಿಪಿಗೆ ನಿರ್ದೇಶಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಡಿ.25ರೊಳಗೆ ಪರಿಗಣಿಸಿ ಕಾನೂನು ಪ್ರಕಾರ ಆದೇಶ ಹೊರಡಿಸುವಂತೆ ಡಿ.21ರಂದು ಈಶಾನ್ಯ ವಿಭಾಗದ ಡಿಸಿಪಿಗೆ ಸೂಚನೆ ನೀಡಿತ್ತು.
ಕಾರ್ಯಕ್ರಮಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸುವ ಹಿನ್ನಲೆಯಲ್ಲಿ ಪ್ರತಿಕ್ರಿಯೆನೀಡಿರುವ ಟೈಮ್ಸ್ ಕ್ರಿಯೇಷನ್ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್ ಹರೀಶ್ ಅವರು, ರಾಜ್ಯವ್ಯಾಪತಿ ಹೊಸ ವರ್ಷಾಚರಣೆ ಸಂಭ್ರಮ ಇರುವುದರಿಂದ ಪೊಲೀಸರಿಗೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವುದು ಕಷ್ಟವಾಗಲಿದೆ. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ನಿರಾಕರಿಸುವ ಪೊಲೀಸರ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಕಾರ್ಯಕ್ರಮವನ್ನು ಫೆಬ್ರವರಿ ತಿಂಗಳಿನಲ್ಲಿ ಮುಂದೂಡಲು ನಿರ್ಧರಿಸಿದ್ದೇವೆ. ಶೀಘ್ರ ಈಶಾನ್ಯ ವಲಯದ ಡಿಸಿಪಿ ಎಸ್.ಗಿರೀಶ್ ಅವರೊಂದಿಗೆ ಚರ್ಚಿಸಿ ದಿನಾಂಕವನ್ನು ನಿಗದಿ ಮಾಡುತ್ತೇವೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSunny Leoneಸನ್ನಿ ಲಿಯೋನ್ಬೆಂಗಳೂರು ಪೊಲೀಸರುBengaluru policeSunny night in Bengaluruಸನ್ನಿ ನೈಟ್ ಇನ್ ಬೆಂಗಳೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


