ರಾಜ್ಯ

ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಸೂಕ್ತ ಬಂದೋಬಸ್ತ್‌ ಗೆ ರಾಮಲಿಂಗಾ ರೆಡ್ಡಿ ಸೂಚನೆ

ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸಬೇಕು...

ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಸೂಕ್ತ ಬಂದೋಬಸ್ತ್‌ ಗೆ ರಾಮಲಿಂಗಾ ರೆಡ್ಡಿ ಸೂಚನೆ
ರಾಮಲಿಂಗಾ ರೆಡ್ಡಿ
Published On :
ಬೆಂಗಳೂರು: ಮಹದಾಯಿ ಹಾಗೂ ಕಳಸಾ ಬಂಡೂರಿ ಯೊಜನೆ ಜಾರಿ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿ ಬುಧವಾರ ಉತ್ತರ ಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಕರೆ ನೀಡಿದೆ.
ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಾಳೆ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಬಂದ್ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ ಅವರು, ಹೋರಾಟಗಾರರು ಗಲಾಟೆ, ಹಿಂಸಾಚಾರಕ್ಕೆ ಅವಕಾಶ ನೀಡದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ ಎಂದು ಹೇಳಿದರು.
ಮಹದಾಯಿ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್  ಕರೆ ನೀಡಲಾಗಿದ್ದು, ಬಂದ್ ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಮನವಿ ಮಾಡಿದೆ.
ಕಳಸಾ ಬಂಡೂರಿ ಹೋರಾಟ ಸಮಿತಿ ಬಂದ್ ಗೆ ಕನ್ನಡ ಚಿತ್ರೋದ್ಯಮ, ವಾಟಾಳ್ ನಾಗರಾಜ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಡಿಸೆಂಬರ್ 27ರ ಉತ್ತರ ಕರ್ನಾಟಕ ಬಂದ್ ವೇಳೆ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸುವುದಾಗಿ ಸಮಿತಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.