ಧರ್ಮ ವಿಭಜನೆ ಪ್ರಯತ್ನ ಮಾಡುತ್ತಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ
ಯಾವುದೇ ಧರ್ಮವನ್ನು ವಿಭಜನೆ ಮಾಡುವ ಪ್ರಯತ್ನನ್ನು ನಾನು ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

Published On :
ಹುಬ್ಬಳ್ಳಿ: ಯಾವುದೇ ಧರ್ಮವನ್ನು ವಿಭಜನೆ ಮಾಡುವ ಪ್ರಯತ್ನನ್ನು ನಾನು ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಗರದಲ್ಲಿ ನಡೆದ ವೀರಶೈವ, ಲಿಂಗಾಯತ ಸಮಾವೇಶದಲ್ಲಿ ಕೇಳಿ ಬಂದಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಇದರಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.
ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಈ ವರೆಗೂ ಐದು ಅರ್ಜಿಗಳು ಬಂದಿವೆ. ಒಬ್ಬೊಬ್ಬರದ್ದು ಒಂದೊಂದು ಬೇಡಿಕೆ ಇದೆ. ಎಲ್ಲಾ ಅರ್ಜಿಗಳನ್ನು ಆಯೋಗಕ್ಕೆ ಕಳುಹಿಸಿದ್ದೇನೆ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ತಿಳಿಸಿದ್ದಾರೆ.
ವೀರಶೈವ/ಲಿಂಗಾಯತ ಧರ್ಮಗಳು ಸಂಖ್ಯಾತ್ಮಕವಾಗಿ ಬಲಿಷ್ಟವಾಗಿರುವ ಹಾಗೂ ರಾಜಕೀಯ ಪ್ರಭಾವವನ್ನು ಹೊಂದಿರುವ ಸಮುದಾಯವಾಗಿದೆ. ವೀರಶೈವ ಮಹಾಸಭಾ ನಾಯಕರು ತಮಗೆ ಪ್ರತ್ಯೇಕ ಧರ್ಮ ಬೇಕೆಂದು ಹೇಳುತ್ತಾರೆ. ಆದರೆ, ಅದು ವೀರಶೈವ-ಲಿಂಗಾಯತ ಧರ್ಮವಾಗಿದೆ. ಇನ್ನು ಲಿಂಗಾಯತರು ತಮಗೆ ಪ್ರತ್ಯೇಕ ಧರ್ಮ ಬೇಕೆಂದು ಹೇಳುತ್ತಾರೆ, ಆಗ್ರಹಗಳು ಹೀಗಿರುವಾಗ ನಾನೇನು ಮಾಡಲು ಸಾಧ್ಯ? ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಸರ್ಕಾರ ಜವಾಬ್ದಾರಿಯುತವಾಗಿ ಸ್ವೀಕರಿಸಿದ್ದು, ಅರ್ಜಿಗಳನ್ನು ಈಗಾಗಲೇ ಆಯೋಗಕ್ಕೆ ಸಲ್ಲಿಕೆ ಮಾಡಿದ್ದೇವೆ. ಆಯೋಗ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕseparate religionಪ್ರತ್ಯೇಕ ಧರ್ಮVeerashivas-Lingayatsವೀರಶೈವ-ಲಿಂಗಾಯತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


