ಅನಂತ್ ಕುಮಾರ್ ಹೆಗಡೆ ನಾಲಿಗೆಗೆ ರೂ. ಒಂದು ಕೋಟಿ ಬಹುಮಾನ' ಜಿಲ್ಲಾ ಪಂಚಾಯತ್ ಸದಸ್ಯ ಹೇಳಿಕೆ
ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಅವರ ನಾಲಿಗೆ ಕತ್ತರಿಸಿ ತಂದರೆ 1ಕೋಟಿ ರೂ. ನಗದು ಬಹುಮಾನ ನೀಡಲಾಗುವುದು' ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ.....

Published On :
ಕಲಬುರ್ಗಿ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಅವರ ನಾಲಿಗೆ ಕತ್ತರಿಸಿ ತಂದರೆ 1ಕೋಟಿ ರೂ. ನಗದು ಬಹುಮಾನ ನೀಡಲಾಗುವುದು' ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುರುಶಾಂತ ಪಟ್ಟೇದಾರ ಹೇಳಿದರು.
ಇಂದು ಕಲಬುರ್ಗಿಯಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಪಟ್ಟೇದಾರ "ಸಚಿವರು ಜಾತ್ಯತೀತ ಪದಕ್ಕೆ ಚ್ಯುತಿ ತರುವ ಹೇಳಿಕೆ ನೀಡಿದ್ದಾರೆ. ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕಿತ್ತು ಹಾಕಬೇಕು. ದೇಶದ ಎಲ್ಲ ಜನರು ಶಾಂತಿಯಿಂದ ಬದುಕುತ್ತಿದ್ದಾರೆ ಆದರೆ ಕೇಂದ್ರ ಮಂತ್ರಿಗಳಾದ ಅನಂತಕುಮಾರ್ ಹೆಗ್ಡೆ ತಮ್ಮ ಹೇಳಿಕೆಗಳ ಮೂಲಕ ತ್ಯಾತೀತರಿಗೆ ಅವಮಾನ ಮಾಡಿದ್ದಾರೆ. ಭಾರತೀಯ ಸಂವಿಧಾನವನ್ನು ವಿರೋಧಿಸುವವರು ದೇಶದ್ರೋಹಿಗಳೆನಿಸುತ್ತಾರೆ. ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕಿತ್ತು ಹಾಕಬೇಕು" ಎಂದು ಒತ್ತಾಯಪಡಿಸಿದ್ದಾರೆ.
"ಜಾತ್ಯಾತೀತರಿಗೆ ಅಪ್ಪ ಅಮ್ಮ ಯಾರೆಂದೂ ಗೊತ್ತಿಲ್ಲ" ಎಂದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ. ಈ ಸಂಬಂಧ ಕಾನೂನು ಸಲಹೆಗಾರರೊಡನೆ ಚರ್ಚೆ ನಡೆದಿದೆ. ಶೀಘ್ರದಲ್ಲಿ ಮೊಕದ್ದಮೆ ದಾಖಲಾಗಲಿದೆ ಎಂದು ಅವರು ಹೇಳಿದ್ದಾರೆ.
ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು "ಪ್ಪ-ಅಮ್ಮ ಯಾರೆಂಬುದು ಗೊತ್ತಿಲ್ಲದವರು ಜಾತ್ಯಾತೀತರು" ಎಂದು ಹೇಳಿಕೆಯನ್ನು ನಿಡಿದ್ದು ಇದು ತೀವ್ರ ವಿವಾದವನ್ನು ಹುಟ್ಟುಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅನಂತ್ ಕುಮಾರ್ ಹೆಗಡೆZilla Panchayath memberGurukanth PattedarAnanthkumar Hegdeಜಿಲ್ಲಾ ಪಂಚಾಯತ್ ಸದಸ್ಯಗುರುಕಾಂತ್ ಪಟ್ಟೇದಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


