ರಾಜ್ಯ

ತಲಶ್ಶೆರಿ-ಮೈಸೂರು ರೈಲ್ವೆ ಮಾರ್ಗ ನಿರ್ಮಾಣ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಪಿಯೂಷ್ ಗೋಯಲ್

ಸ್ಥಳೀಯ ಕಾರ್ಯಕರ್ತರು ಮತ್ತು ಪರಿಸರವಾದಿಗಳು ವಿರೋಧಿಸುತ್ತಿರುವ ಕರ್ನಾಟಕ ....

ತಲಶ್ಶೆರಿ-ಮೈಸೂರು ರೈಲ್ವೆ ಮಾರ್ಗ ನಿರ್ಮಾಣ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ: ಪಿಯೂಷ್ ಗೋಯಲ್
ಪಿಯೂಷ್ ಗೋಯಲ್
Published On :
ಬೆಂಗಳೂರು: ಸ್ಥಳೀಯ ಕಾರ್ಯಕರ್ತರು ಮತ್ತು ಪರಿಸರವಾದಿಗಳು ವಿರೋಧಿಸುತ್ತಿರುವ ಕರ್ನಾಟಕ ಮತ್ತು ಕೇರಳರ ಸಂರಕ್ಷಿತ ಪ್ರದೇಶಗಳು ಮತ್ತು ಮೀಸಲು ಅರಣ್ಯಗಳ ಮೂಲಕ ಹಾದುಹೋಗುವ ತಲಸ್ಸೆರ್ರಿ-ಮೈಸೂರು ಹೊಸ ರೈಲು ಮಾರ್ಗದ ಅಭಿವೃದ್ಧಿ ಕುರಿತು ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟಪಡಿಸಿದ್ದಾರೆ.
ಯೋಜನೆಯ ಮುಂಚೂಣಿಯಲ್ಲಿರುವ ಕೇರಳ ಸರ್ಕಾರ, ಉದ್ದೇಶಿತ ಬ್ರಾಡ್ ಗೇಜ್ ಮಾರ್ಗದ ಬಗ್ಗೆ ವಿಸ್ತೃತ ಯೋಜನಾ ವರದಿಯನ್ನು ಮತ್ತು ಸಾಧ್ಯತಾ ಅಧ್ಯಯನ ನಡೆಸುವಂತೆ ಕೊಂಕಣ ರೈಲ್ವೆ ನಿಗಮ ನಿಯಮಿತಕ್ಕೆ ವಹಿಸಿದೆ.
ರೈಲ್ವೆ ಮಂಡಳಿ ಮತ್ತು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಮಧ್ಯೆ ನಡೆದಿರುವ ಮಾತುಕತೆಯಂತೆ, ಕೇರಳ ಸರ್ಕಾರ ವಿಸ್ತೃತ ವರದಿಯನ್ನು ತಯಾರಿಸಿ ಇದೇ 31ರೊಳಗೆ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಸಲ್ಲಿಸುವ ಕುರಿತು ನಿರ್ಧಾರ ಮಾಡಲಾಯಿತು. ಕರ್ನಾಟಕ ಕೊಡಗು ಜಿಲ್ಲೆಯಲ್ಲಿ ಉದ್ದೇಶಿತ ರೈಲ್ವೆ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಲೋಕಸಭೆಯಲ್ಲಿ ನಿನ್ನೆ ಸಚಿವ ಪಿಯೂಷ್ ಗೋಯಲ್  ಯೋಜನೆಯ ವರದಿಯನ್ನು ಮಂಡಿಸಿದರು. ಕೇರಳ ಮತ್ತು ಕರ್ನಾಟಕ ಸರ್ಕಾರಗಳೆರಡೂ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. 
ಸಮೀಕ್ಷೆ ನಡೆಸಿದ ಆಧಾರದ ಮೇಲೆ ಯೋಜನೆಯ ಅನುಮತಿ ನಿರ್ಧಾರವಾಗುತ್ತದೆ. ಹೀಗಾಗಿ ಕೇರಳ ಸರ್ಕಾರ ಕರ್ನಾಟಕಕ್ಕೆ ಪ್ರಸ್ತಾವನೆಯನ್ನು ಕಳುಹಿಸಬೇಕು. ಇದರಿಂದ ವನ್ಯಜೀವಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲವೆಂದಾದರೆ ಅರಣ್ಯ ಮತ್ತು ಕಂದಾಯ ಇಲಾಖೆ ಕೇರಳ ಸರ್ಕಾರಕ್ಕೆ ಸಮೀಕ್ಷೆ ನಡೆಸಲು ಸಹಾಯ ಮಾಡಲಿವೆ ಎಂದರು.
ಯೋಜನೆಯನ್ನು ಮೀಸಲು ಅರಣ್ಯ ಮತ್ತು ವನ್ಯಜೀವಿಗಳಿಗೆ ಯಾವುದೇ ತೊಂದರೆಯಿಲ್ಲವೆಂದಾದರೆ ವಿಶೇಷ ಯೋಜನಾ ವಾಹನಗಳ ರಚನೆಗೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಕೇರಳ ಸರ್ಕಾರ ನಿಯೋಜಿತ ದೆಹಲಿ ಮೆಟ್ರೊ ರೈಲು ನಿಗಮ ತಯಾರಿಸಿದ ಸಾಧ್ಯತಾ ವರದಿಯಲ್ಲಿ ಯೋಜನೆ ಆರ್ಥಿಕವಾಗಿ ಅಲಭ್ಯ ಎಂದು ಕಂಡುಬಂದಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.