ರಾಜ್ಯ

5 ನಿಮಿಷದಲ್ಲಿ ಪ್ರಧಾನಿ ಮೋದಿ ಮಹದಾಯಿ ವಿವಾದ ಬಗೆಹರಿಸಬಹುದು: ಪರಮೇಶ್ವರ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ದೂರವಾಣಿ ಕರೆ ಮೂಲಕ 5 ನಿಮಿಷದಲ್ಲಿ ಮಹದಾಯಿ ವಿವಾದವನ್ನು ಬಗೆಹರಿಸಬಹುದು. ಆದರೆ, ಮೋದಿಯವರು ಮಧ್ಯಸ್ಥಿಕೆ ವಹಿಸದೆ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್...

5 ನಿಮಿಷದಲ್ಲಿ ಪ್ರಧಾನಿ ಮೋದಿ ಮಹದಾಯಿ ವಿವಾದ ಬಗೆಹರಿಸಬಹುದು: ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್
Published On :
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ದೂರವಾಣಿ ಕರೆ ಮೂಲಕ 5 ನಿಮಿಷದಲ್ಲಿ ಮಹದಾಯಿ ವಿವಾದವನ್ನು ಬಗೆಹರಿಸಬಹುದು. ಆದರೆ, ಮೋದಿಯವರು ಮಧ್ಯಸ್ಥಿಕೆ ವಹಿಸದೆ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ನಗರದ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರು ಕೇವಲ ದೂರವಾಣಿ ಕರೆ ಮೂಲಕ 5 ನಿಮಿಷದಲ್ಲಿ ಮಹದಾಯಿ ಸಮಸ್ಯೆಯನ್ನು ಬಗೆಹರಿಸಬಹುದು. ಆಧರೆ, ಮೋದಿಯವರು ಮಧ್ಯಸ್ಥಿಕೆ ವಹಿಸದೆಯೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ, ಇಷ್ಟೂ ಮಾಡಲಾಗದವರು ಆದೆಂತಹ ಪ್ರಧಾನಮಂತ್ರಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಮತದಾರರಿಗೆ ಕರೆ ನೀಡಿದ್ದಾರೆ. 
ಮಹದಾಯಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ಅವರು ಹುಡುಗಾಟ ಆಡುತ್ತಿದ್ದಾರೆ. ಸುಳ್ಳು ಹೇಳಿಕೆ ಮತ ಹಾಕಿಸುತ್ತವೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ಬಾರಿ ಪತ್ರ ಬರೆದರೂ ಗೋವಾ ಮುಖ್ಯಮಂತ್ರಿ ಉತ್ತರ ನೀಡಿಲ್ಲ. ಆದರೆ, ಒಂದು ಪಕ್ಷದ ಅಧ್ಯಕ್ಷರಿಗೆ ಕಾಗದ ಬರೆಯುತ್ತೀರಾ, ಸಿಎಂಗೆ ಏಕೆ ಉತ್ತರ ಕೊಡಲಿಲ್ಲ? ಇದು ರಾಜಕೀಯ ಅಲ್ಲವೇ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಪ್ರಶ್ನಿಸಿದ್ದಾರೆ. 
ಬಿಜೆಪಿ ನಾಯಕರು ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಮೂಲಕ ನಾಯಕ ಆಡಿದ್ದಾರೆ. ಈವರೆಗೂ ಬೇರೆ ಪಕ್ಷದ ಕಚೇರಿ ಎದುರು ಪ್ರತಿಭಟನೆ ಮಾಡುವುದನ್ನು ನಾನು ಎಲ್ಲಿಯೂ ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಖಾಲಿ ಕುರ್ಚಿಗಳನ್ನು ಕಂಡು ಕೆಂಡಾಮಂಡಲಗೊಂಡ ಪರಮೇಶ್ವರ್
ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳನ್ನು ಕಂಡ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಕೆಂಡಾಮಂಡಲಗೊಂಡಿದ್ದರು. 
ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿಯೇ ಹಲವು ಸಚಿವರು ಹಾಗೂ ಕಾರ್ಯಕರ್ತರು ಹೊರ ನಡೆಯುತ್ತಿದ್ದರು. ಈ ವೇಳೆ ಪಕ್ಷದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬರದಿದ್ದರೆ, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬರುತ್ತಾರೆಯೇ? ಎಂದು ಪ್ರಶ್ನಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.