ರಾಜ್ಯ

ಅರ್ಕಾವತಿ ನದಿಗೆ ಉರುಳಿ ಬಿದ್ದ ಬಿಎಂಟಿಸಿ ಬಸ್; 40 ಜನರಿಗೆ ಗಾಯ

ತಾವರೆಕೆರೆಯಿಂದ ನೆಲಮಂಗಲಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ವೊಂದು ಅರ್ಕಾವತಿ ನದಿಗೆ ಉರುಳಿ ಬಿದ್ದಿದ್ದು, ಪರಿಣಾಮ ಬಸ್ ನಲ್ಲಿದ್ದ 40 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಅರ್ಕಾವತಿ ನದಿಗೆ ಉರುಳಿ ಬಿದ್ದ ಬಿಎಂಟಿಸಿ ಬಸ್; 40 ಜನರಿಗೆ ಗಾಯ
ಸಂಗ್ರಹ ಚಿತ್ರ
Published On :

ಬೆಂಗಳೂರು: ತಾವರೆಕೆರೆಯಿಂದ ನೆಲಮಂಗಲಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ವೊಂದು ಅರ್ಕಾವತಿ ನದಿಗೆ ಉರುಳಿ ಬಿದ್ದಿದ್ದು, ಪರಿಣಾಮ ಬಸ್ ನಲ್ಲಿದ್ದ 40 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಇಂದು ಬೆಳಿಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಸೇರಿದ ಬಸ್ ವೊಂದು ತಾವರೆಕೆರೆಯಿಂದ ನೆಲಮಂಗಲಕ್ಕೆ ಹೋಗುತ್ತಿತ್ತು. ಬೆಂಗಳೂರು ದಕ್ಷಿಣ ತಾಲೂಕಿನ ವರ್ತೂರು ಬಳಿ ಬರುತ್ತಿದ್ದಂತೆ ಎದುರಿಗೆ ವಾಹನವೊಂದು ಬಂದಿದೆ. ಈ ವೇಳೆ ಆ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಬಸ್ ರಸ್ತೆ ಬದಿಯಲ್ಲಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಅರ್ಕಾವತಿ ನದಿಗೆ ಉರುಳಿ ಬಿದ್ದಿದೆ.

ಪರಿಣಾಮ ಬಸ್ ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಸೇರಿ 40 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನದಿಯಿಂದ ಬಸ್'ನ್ನು ಮೇಲೆತ್ತಲು ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಹಾಗೂ ಪೊಲೀಸರು ಹರಸಾಹಸಪಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.