ರಾಜ್ಯ

ಬೆಂಗಳೂರು: ಗೃಹಪ್ರವೇಶಕ್ಕೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆಗೆ ಅನುಮತಿಗಾಗಿ ಕೋರ್ಟ್ ಮೆಟ್ಟಿಲೇರಿದ ಮಾಜಿ ರೌಡಿ

ಕರ್ನಾಟಕ ಹೈಕೋರ್ಟ್ ಮುಂದೆ ಬಂದಿದ್ದ ವಿಶೇಷವಾದ ರಿಟ್ ಅರ್ಜಿಯೊಂದು ಎಲ್ಲರ ಗಮನ ಸೆಳೆದಿದೆ. ಮಾಜಿ ರೌಡಿ ಶೀಟರ್ ಒಬ್ಬ ತನ್ನ ಹೊಸ ಮನೆಯ...

ಬೆಂಗಳೂರು: ಗೃಹಪ್ರವೇಶಕ್ಕೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆಗೆ ಅನುಮತಿಗಾಗಿ ಕೋರ್ಟ್ ಮೆಟ್ಟಿಲೇರಿದ ಮಾಜಿ  ರೌಡಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಂದೆ  ಬಂದಿದ್ದ ವಿಶೇಷವಾದ ರಿಟ್ ಅರ್ಜಿಯೊಂದು ಎಲ್ಲರ ಗಮನ ಸೆಳೆದಿದೆ. ಮಾಜಿ ರೌಡಿ ಶೀಟರ್ ಒಬ್ಬ ತನ್ನ ಹೊಸ ಮನೆಯ ಗೃಹ ಪ್ರವೇಶಕ್ಕೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ಮಾಡಲು ಅನುಮತಿ ನೀಡಬೇಕೆಂದು ಹೈಕೋರ್ಟ್ ಗೆ ಮನವಿ ಸಲ್ಲಿದ್ದಾನೆ.

ಮುನಿರಾಜು ವರ್ತೂರಿನಲ್ಲಿ ಮನೆ ಕಟ್ಟಿಸಿದ್ದು, ಮನೆಯ ಗೃಹಪ್ರವೇಶ ಸಮಾರಂಭ ಫೆ.9ರಂದು ನಡೆಯಲಿದೆ. ಹೊಸ ಮನೆಯ ಗೃಹಪ್ರವೇಶಕ್ಕೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ಮಾಡಲು ನಗರ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಮುನಿರಾಜು ಎಂಬಾತ ಕೋರ್ಟ್ ಮೊರೆ ಹೋಗಿದ್ದಾನೆ. ಅರ್ಜಿ ವಿಚಾರಣೆ ವೇಳೆ ಮುನಿರಾಜು ಪರ ವಕೀಲರು, ಪಕ್ಕದ ಮನೆಯ ನಿವಾಸಿಯೊಬ್ಬರು ಗೃಹಪ್ರವೇಶ ಸಂದರ್ಭದಲ್ಲಿ ಹೆಲಿಕಾಪ್ಟರ್‍ನಲ್ಲಿ ಪುಷ್ಪಾರ್ಚನೆ ಮಾಡಿದ್ದಾರೆ. ಹೀಗಾಗಿ ಮುನಿರಾಜು ಹೆಲಿಕಾಪ್ಟರ್‍ನಲ್ಲಿ ಪುಷ್ಪಾರ್ಚನೆ ಮಾಡಲೇಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ಆದರೆ ಪೊಲೀಸರು ಅನುಮತಿ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಪುಷ್ಪಾರ್ಚನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಆದ್ರೆ ಇದಕ್ಕೆ ಗರಂ ಆದ ನ್ಯಾಯಮೂರ್ತಿಗಳು ಅರ್ಜಿದಾರನನ್ನು, ಹೆಲಿಕಾಪ್ಟರ್ ನಲ್ಲಿ ಪುಷ್ಪಾರ್ಚನೆ ನಡೆಸಲು ಹೈಕೋರ್ಟಿಗೆ ಬರಬೇಕೇ? ಪಕ್ಕದ ಮನೆಯವನು ಮಾಡುತ್ತಾನೆ ಎಂದು ನೀವು ಆತನನ್ನು ಅನುಸರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ಅಷ್ಟೇ ಅಲ್ಲದೇ ಈ ರೀತಿ ಹಣ ಪೋಲು ಮಾಡುವ ಬದಲು ಬಡವರಿಗೆ ನೆರವಾಗಬಹುದಲ್ಲವೇ? ಮುಂಬೈ ಶ್ರೀಮಂತರೊಬ್ಬರು ಮಗಳ ಅದ್ಧೂರಿ ಮದುವೆ ಬದಲು ಮನೆಯನ್ನು ಹಂಚಿದ್ದಾರೆ. ಬಡವರಿಗಾಗಿ ನೂರಾರು ಮನೆಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ನೀವು ಯಾಕೆ ಆ ರೀತಿ ಮಾಡಬಾರದು. ಒಣ ಆಡಂಬರ ಯಾಕೆ ಬೇಕು ಎಂದು ಪ್ರಶ್ನಿಸಿದರು.

ನ್ಯಾಯಾಧೀಶರು ಉದಾಹರಣೆಯೊಂದಿಗೆ ಸಲಹೆ ನೀಡಿದರೂ ಅರ್ಜಿದಾರರಾದ ಮುನಿರಾಜು ತಮ್ಮ ಪಟ್ಟನ್ನು ಬಿಡಲೇ ಇಲ್ಲ. ಕೇವಲ ಒಂದೂವರೆ ಗಂಟೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ಮಾಡಿದರೆ ಕಾನೂನು ಸುವ್ಯವಸ್ಥೆಗೆ ಯಾವುದೇ ಉಲ್ಲಂಘನೆ ಯಾಗುವುದಿಲ್ಲ ಎಂದು ಹೇಳಿದ್ದಾನೆ.

ಹೀಗಾಗಿ, ನ್ಯಾಯಾಧೀಶರು ಹೆಲಿಕಾಪ್ಟರ್‍ನಲ್ಲಿ ಪುಷ್ಪಾರ್ಚನೆ ನಡೆಸಲು ಅನುಮತಿ ನೀಡಲು ಕಾನೂನು ಬದ್ಧ ಹಕ್ಕು ಇದೆಯೇ? ಇದರ ಬಗ್ಗೆ ನಿಲುವು ಏನು ಎಂದು ಸರ್ಕಾರಿ ವಕೀಲರಿಗೆ ಪ್ರಶ್ನಿಸಿ ವಿಚಾರಣೆಯನ್ನು ಫೆ.6ಕ್ಕೆ ಮುಂದೂಡಿದರು.

ಮುನಿರಾಜು ತನ್ನ ಮನೆ ಗೃಹ ಪ್ರವೇಶಕ್ಕೆ ಹೆಲಿಕಾಪ್ಟರ್ ನಿಂದ ಪುಷ್ಪಾರ್ಚನೆ ಮಾಡಲು ಡೆಕ್ಕನ್ ಚಾರ್ಟರ್ ಗೆ ಕೇಳಿದ್ದಾನೆ, ಮೊದಲು ಪೊಲೀಸರಿಂದ ಅನುಮತಿ ಪಡೆಯುವಂತೆ ಡೆಕ್ಕನ್ ಚಾರ್ಟರ್ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.