ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಮೇಲೆ ಫೈರಿಂಗ್: ಸಹೋದರ ಪಾಯ್ಸನ್ ರಾಮ ಪೊಲೀಸ್ ವಶಕ್ಕೆ
ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ಸಹೋದರ ಪಾಯ್ಸನ್ ರಾಮನನ್ನು ಪೊಲೀಸರು ವಶಕ್ಕೆ...

ಬೆಂಗಳೂರು: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ಸಹೋದರ ಪಾಯ್ಸನ್ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಲಹಂಕದ ಕೋಗಿಲು ಗೇಟ್ ಬಳಿ ಶ್ರೀನಿವಾಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶ್ರೀನಿವಾಸ್ ಮತ್ತು ಕಾರು ಚಾಲಕ ಮೂರ್ತಿ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾಗೃತ ಕ್ರಮವಾಗಿ ಪೊಲೀಸರು ಆಸ್ಪತ್ರೆಯ ಎದುರು 2 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಿದೆ. ಯಲಹಂಕದ ಪೊಲೀಸರು, ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಶ್ರೀನಿವಾಸ್ ಅಲಿಯಾಸ್ ಡಾಬಾ ಸೀನಾ ರೌಡಿಶೀಟರ್ ಪಾಯ್ಸನ್ ರಾಮನ ಸ್ವಂತ ಅಣ್ಣನಾಗಿದ್ದು ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಎಪಿಎಂಸಿ ಸದಸ್ಯರಾಗಿ ಆಯ್ಕೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


