ರಾಜ್ಯ

ಶಿವಮೊಗ್ಗ ಕಾಲೇಜಿನಲ್ಲಿ ಬುರ್ಖಾ ವಿವಾದ: ಘರ್ಷಣೆ ಪರಿಸ್ಥಿತಿ, ಪೊಲೀಸರ ಮಧ್ಯಪ್ರವೇಶ

ಸಮವಸ್ತ್ರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಘರ್ಷಣೆ ಪರಿಸ್ಥಿತಿ ಉಂಟಾದ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದಿದೆ.

ಶಿವಮೊಗ್ಗ ಕಾಲೇಜಿನಲ್ಲಿ ಬುರ್ಖಾ ವಿವಾದ: ಘರ್ಷಣೆ ಪರಿಸ್ಥಿತಿ, ಪೊಲೀಸರ ಮಧ್ಯಪ್ರವೇಶ
ಸಾಂಕೇತಿಕ ಚಿತ್ರ
Published On :
ಶಿವಮೊಗ್ಗ: ಸಮವಸ್ತ್ರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಘರ್ಷಣೆ ಪರಿಸ್ಥಿತಿ ಉಂಟಾದ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದಿದೆ. 
ಕೆಲವು ವಿದ್ಯಾರ್ಥಿಗಳು ಕಾಲೇಜಿಗೆ ಬುರ್ಖಾ ಧರಿಸಿ ಬರುತ್ತಿದ್ದಾರೆ, ಅದಕ್ಕೆ ನಿರ್ಬಂಧ ವಿಧಿಸುತ್ತಿಲ್ಲ. ಆದರೆ ಸಮವಸ್ತ್ರ ಧರಿಸದೇ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು, ಪ್ರತಿಭಟನೆ ಮಾಡಿದ್ದು, ಕೇಸರಿ ಶಾಲು ಧರಿಸಿ ತರಗತಿಗಳಿಗೆ ಪ್ರವೇಶಿಸಲು ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. 
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವ ಭೋಜ ನಾಯ್ಕ, ಕಾಲೇಜು ಕ್ಯಾಂಪಸ್ ನಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ ಎಂದು ಹೇಳಿದ್ದಾರೆ. ಸಮವಸ್ತ್ರ ಕಡ್ಡಾಯಕ್ಕಾಗಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ವಿದ್ಯಾರ್ಥಿಗಳ ಮತ್ತೊಂದು ಗುಂಪು ವಿರೋಧ ವ್ಯಕ್ತಪಡಿಸಿದ್ದು, ಘರ್ಷಣೆ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ, ನಂತರ ಕಾಲೇಜು ಆಡಳಿತ ಮಂಡಳಿ ಒಂದು ದಿನ ರಜೆ ಘೋಷಿಸಿದ್ದು, ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಸಭೆ ನಡೆಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.