"ಮೈಸೂರು-ಮದ್ರಾಸ್ ಪ್ರೆಸಿಡೆನ್ಸಿ ಒಪ್ಪಂದವನ್ನು ಈಗಲೂ ಪಾಲಿಸಬೇಕೇ": ಸುಪ್ರೀಂ ಕೋರ್ಟ್ ಪ್ರಶ್ನೆ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ "ಮೈಸೂರು-ಮದ್ರಾಸ್ ಪ್ರೆಸಿಡೆನ್ಸಿ ನಡುವಿನ ಒಪ್ಪಂದವನ್ನು ಈಗಲೂ ಪಾಲಿಸಬೇಕೇ ಎಂದು ಪ್ರಶ್ನಿಸಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದೆ.

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ "ಮೈಸೂರು-ಮದ್ರಾಸ್ ಪ್ರೆಸಿಡೆನ್ಸಿ ನಡುವಿನ ಒಪ್ಪಂದವನ್ನು ಈಗಲೂ ಪಾಲಿಸಬೇಕೇ ಎಂದು ಪ್ರಶ್ನಿಸಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದೆ.
ಕಾವೇರಿ ವಿವಾದ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ದಶಕಗಳಿಂದಲೂ ಕಾವೇರಿ ನದಿ ನೀರಿಗಾಗಿ ಉಭಯ ರಾಜ್ಯಗಳು ಹೋರಾಟ ನಡೆಸುತ್ತಿವೆ. ಮೈಸೂರು- ಮದ್ರಾಸ್ ಪ್ರೆಸಿಡೆನ್ಸಿ ನಡುವೆ ಈ ಹಿಂದೆ ನಡೆದಿದ್ದ ಒಪ್ಪಂದವನ್ನು ಕರ್ನಾಟಕ ಪಾಲಿಸಿಕೊಂಡು ಬಂದಿದೆ. ಆದರೆ ಸಂವಿಧಾನ ರಚನೆಯಾದ ಬಳಿಕವೂ ಈ ಒಪ್ಪಂದವನ್ನು ಪಾಲಿಕೊಂಡು ಬಂದಿರುವುದು ಹೇಗೆ ಸಾಧ್ಯ ಎಂದು ಹೇಳಿದೆ. ಅಲ್ಲದೆ ಪ್ರಸ್ತುತ ಸನ್ನಿವೇಶಗಳಿಗೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಈ ಒಪ್ಪಂದವನ್ನು ಪಾಲಿಸಬೇಕೇ ಅಥವಾ ಬೇಡವೇ ಎಂಬ ಅಂಶಗಳ ಕುರಿತು ಮುಂದಿನ ದಿನಗಳಲ್ಲಿ ವಿಚಾರಣೆ ನಡೆಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.
ಅಲ್ಲದೆ ಪ್ರಕರಣ ಸಂಬಂಧ ಏಪ್ರಿಲ್ 11ರಿಂದ ನಿತ್ಯ ವಿಚಾರಣೆ ಮಾಡಿ, ಏಪ್ರಿಲ್ 11 ಬಳಿಕ ಅಂದರೆ ಮೂರು ವಾರಗಳ ಬಳಿಕ ಅಂತಿಮ ತೀರ್ಪು ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


