ಮೇಟಿ ಸಿಡಿ ಹಗರಣ: ಸಿಐಡಿಯಿಂದ ಅನುಪಮಾ ಶೆಣೈ, ರಾಜಶೇಖರ ಮುಲಾಲಿ ವಿಚಾರಣೆ
ಮಾಜಿ ಸಚಿವ ಎಚ್ ವೈ ಮೇಟಿ ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೆಸ್ಟ್ ಹೌಸ್‌ನಲ್ಲಿ ಸಿಐಡಿ ಡಿವೈಎಸ್ಪಿ ರವಿಶಂಕರ್ ಮಾಜಿ ಡಿವೈಎಸ್ ಪಿ...

ಬೆಂಗಳೂರು: ಮಾಜಿ ಸಚಿವ ಎಚ್ ವೈ ಮೇಟಿ ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೆಸ್ಟ್ ಹೌಸ್‌ನಲ್ಲಿ ಸಿಐಡಿ ಡಿವೈಎಸ್ಪಿ ರವಿಶಂಕರ್ ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಹಾಗೂ ಆರ್ ಟಿಐ ಕಾರ್ಯಕರ್ತ ರಾಜಶೇಖರ ಮುಲಾಲಿ ಅವರ ವಿಚಾರಣೆ ನಡೆಸಿದರು.
ಪ್ರವಾಸಿ ಮಂದಿರದಲ್ಲಿ ಸಿಐಡಿ ಡಿವೈಎಸ್ಪಿ ರವಿಶಂಕರ್ ನೇತೃತ್ವದ ತಂಡ ಪ್ರತ್ಯೇಕವಾಗಿ ಇವರಿಬ್ಬರ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ಮುಲಾಲಿ ಹಾಗೂ ಅನುಪಮಾ ಅವರಿಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ. 2 ತಾಸಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಕಲೆಹಾಕಲಾಗಿದೆ ಎಂದು ತಿಳಿದುಬಂದಿದೆ.
ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಅನುಪಮಾ ಶೆಣೈ ಬುಧವಾರ ಇಲ್ಲಿನ ನ್ಯಾಯಾಲಯಕ್ಕೆ ಆಗಮಿಸಿದ್ದರು. ಇದನ್ನರಿತ ಸಿಐಡಿ ಅಧಿಕಾರಿಗಳು ಶೆಣೈ ಅವರ ವಿಚಾರಣೆ ನಡೆಸಿದ್ದಾರೆ.
ರಾಜಶೇಖರ್ ಮುಲಾಲಿ ಅವರನ್ನು 2 ಗಂಟೆಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಲಾಯಿತು. ಪ್ರಕರಣ ಕುರಿತು ಅಗತ್ಯ ಮಾಹಿತಿ ಪಡೆದರು. ಮಧ್ಯಾಹ್ನ 12ಕ್ಕೆ ಆರಂಭವಾದ ವಿಚಾರಣೆ 2ರವರೆಗೆ ನಡೆಯಿತು. ಸಿಐಡಿ ಡಿವೈಎಸ್ಪಿ ರವಿಶಂಕರ್ ಅವರು ರಾಜಶೇಖರ್ ಮುಲಾಲಿ ಅವರಿಗೆ ಜ.28ರಂದು ನೋಟೀಸ್ ನೀಡಿದ್ದರು. ಅನಿವಾರ್ಯ ಕಾರಣಗಳಿಂದ ಅವರು ಹಾಜರಾಗಿರಲಿಲ್ಲ. ಬೇರೊಂದು ದಿನ ಗೊತ್ತುಮಾಡುವಂತೆ ರಾಜಶೇಖರ್ ಮುಲಾಲಿ ಅವರು ಮನವಿ ಮಾಡಿದ್ದರು.
ವಿಚಾರಣೆ ನಂತರ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಪ್ರತಿಕ್ರಿಯಿಸಿ, 'ನಿಷ್ಠಾವಂತ ಹೋರಾಟಗಾರರನ್ನು ರಾಜ್ಯ ಸರಕಾರ ಸಿಐಡಿ ವಿಚಾರಣೆಗೆ ಒಳಪಡಿಸುವ ಮೂಲಕ ಅಗೌರವ ತೋರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಗೊತ್ತಿರುವ ಸತ್ಯ ಮತ್ತು ವಾಸ್ತವ ಸಂಗತಿಯನ್ನು ವಿವರಿಸಿರುವೆ. ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವೆ. ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇರಲಿಲ್ಲ ಎಂದರು..
ಸಿಐಡಿ ವಿಚಾರಣೆ ಎದುರಿಸುವಂತೆ ಮಾಡುವ ಮೂಲಕ ರಾಜ್ಯ ಸರ್ಕಾರ ದೊಡ್ಡದೊಂದು ಬಹುಮಾನ ನೀಡಿದೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


