ರಾಜ್ಯ

ಬೆಳಗಾವಿಯಲ್ಲಿ ಬಾಲಕನ ನಿಗೂಢ ಸಾವು: ಪ್ರತಿಭಟನಾಕಾರರಿಂದ ಶಾಲೆ ಧ್ವಂಸ

14 ವರ್ಷದ ಶಾಲಾ ಬಾಲಕನೊಬ್ಬ ನಿಗೂಡವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಶಾಲೆಯ ಮೇಲೆ ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ...

ಬೆಳಗಾವಿಯಲ್ಲಿ ಬಾಲಕನ ನಿಗೂಢ ಸಾವು: ಪ್ರತಿಭಟನಾಕಾರರಿಂದ ಶಾಲೆ ಧ್ವಂಸ
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: 14 ವರ್ಷದ ಶಾಲಾ ಬಾಲಕನೊಬ್ಬ ನಿಗೂಡವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಶಾಲೆಯ ಮೇಲೆ ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಬಿ.ಕೆ ಮಾಡೆಲ್ ಶಾಲೆಯ ಪ್ರಶಾಂತ್ ರಾಜು ಹುಲಿಮನಿ ಎಂಬ 8ನೇ ತರಗತಿ ವಿದ್ಯಾರ್ಥಿ ಬುಧವಾರ ಸಂಜೆ ಶಾಲೆ ಮೈದಾನದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ.  ಕೂಡಲೇ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಶಾಲೆಯ ಕಿಟಿಕಿ ಬಾಗಿಲುಗಳನ್ನು ನಾಶಪಡಿಸಿದ್ದಾರೆ. ಸ್ಥಳಕ್ಕೆ ದಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ತಪ್ಪಿತಸ್ಥರನ್ನು ಬಂಧಿಸುವರ ವರೆಗೂ ಶಾಲೆ ನಡೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಶಾಲಾ ಸಿಬ್ಬಂದಿ ಹಾಗೂ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು ಪ್ರಯೋಜನವಾಗಲಿಲ್ಲ, ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಸುಮ್ಮನಾದರು. ಈ ಸಂಬಂಧ ಬೆಳಗಾವಿ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.