ಹುಬ್ಬಳ್ಳಿಯಲ್ಲಿ ದೇಶದ ಅತಿ ದೊಡ್ಡ ಕೌಶಲ್ಯ ಅಭಿವೃದ್ಧಿ ಕೇಂದ್ರ
ಹಲವು ವರ್ಷಗಳ ನಂತರ ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯದ ಕೊರತೆಯಿಂದ ಬಳಲುತ್ತಿರುವ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ...

Published On :
ಬೆಂಗಳೂರು: ಹಲವು ವರ್ಷಗಳ ನಂತರ ಕೈಗಾರಿಕೆಗಳಿಗೆ ಬೇಕಾದ ಅಗತ್ಯ ಕೌಶಲ್ಯದ ಕೊರತೆಯಿಂದ ಬಳಲುತ್ತಿರುವ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಇದೊಂದು ಸಿಹಿ ಸುದ್ದಿ. ಇದೀಗ ಹುಬ್ಬಳ್ಳಿಯಲ್ಲೇ ದೇಶದ ಅತಿ ದೊಡ್ಡ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಯಾಗುತ್ತಿದೆ.
ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿಯಲ್ಲಿ ದೇಶದ ಅತಿ ದೊಡ್ಡ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸುತ್ತಿದೆ.
ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಫೌಂಡೇಶನ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನವೀನ್ ಜಾ ಅವರು, ಉತ್ತರ ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯದ ಕೊರತೆ ಇದೆ. ಹೀಗಾಗಿ ಹುಬ್ಬಳ್ಳಿಯಲ್ಲಿಯೇ ಈ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಯಿತು ಎಂದರು.
ನಮ್ಮ ಕೇಂದ್ರ ಸಣ್ಣ ನಗರ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಅವರಿಗೆ ಉತ್ತಮ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷ ಮೇನಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಕಾಮಗಾರಿ ಆರಂಭವಾಗಿದ್ದು, ಈ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಮತ್ತು ಏಪ್ರಿಲ್ ನಿಂದ ತರಬೇತಿ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಜಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹುಬ್ಬಳ್ಳಿHUBBALLIlargest skill development centreDeshpande Foundationಕೌಶಲ್ಯ ಅಭಿವೃದ್ಧಿ ಕೇಂದ್ರದೇಶಪಾಂಡೆ ಫೌಂಡೇಶನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


