ರಾಜ್ಯ

ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಿಲ್ಲ ಎಂದು ಪ್ರತಿಭಟಿಸಿ ಬಿಜೆಪಿ ಶಾಸಕರು ಜಗದೀಶ...

ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಬಿಜೆಪಿ ಆಗ್ರಹ
ರಮೇಶ್ ಜಾರಕಿಹೊಳಿ
Published On :

ಬೆಂಗಳೂರು: ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಿಲ್ಲ ಎಂದು ಪ್ರತಿಭಟಿಸಿ ಬಿಜೆಪಿ ಶಾಸಕರು ಜಗದೀಶ ಶೆಟ್ಟರ್‌ ನೇತೃತ್ವದಲ್ಲಿ ವಿಧಾನಸಭೆಯಿಂದ ಸೋಮವಾರ ಸಭಾತ್ಯಾಗ ಮಾಡಿದರು.

ಜಾರಕಿಹೊಳಿ ಮನೆ, ಕಚೇರಿಯ ಮೇಲೆ ಆದಾಯ ತೆರಿಗೆ ಇಲಾಖೆ(ಐ.ಟಿ)ದಾಳಿ ನಡೆಸಿದಾಗ ರು 162 ಕೋಟಿ ಅಘೋಷಿತ ಆಸ್ತಿ ಪತ್ತೆಯಾಗಿದೆ. ಇದನ್ನು ಜಾರಕಿಹೊಳಿ ಅವರೇ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ನಿಲುವಳಿ ಸೂಚನೆಗೆ ಅವಕಾಶ ಕೊಡಬೇಕು ಎಂದು ಶೆಟ್ಟರ್ ಅವರು ಸೋಮವಾರ ಬೆಳಿಗ್ಗೆ ಪ್ರಸ್ತಾವ ಸಲ್ಲಿಸಿದ್ದರು.

ರಾಜ್ಯ ಸರ್ಕಾರ ಇದಕ್ಕೆ ಉತ್ತರ ನೀಡಲು ಬರುವುದಿಲ್ಲ ಎಂಬ ಕಾರಣಕ್ಕೆ  ಈ ವಿಷಯವನ್ನು ನಿಯಮ 69ರ ಅಡಿ ಮಂಡಿಸಲು ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವಕಾಶ ಕಲ್ಪಿಸಿದರು. ಈ ವೇಳೆ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.