ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ವಿಚಾರಣಾ ವೆಚ್ಚವನ್ನು ತಮಿಳುನಾಡು ಭರಿಸಬೇಕು: ಟಿ.ಬಿ ಜಯಚಂದ್ರ
ಜಯಲಲಿತಾ, ಶಶಿಕಲಾ ನಟರಾಜನ್ ಆಕ್ರಮ ಆಸ್ತಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕರ್ನಾಟಕ ಸರ್ಕಾರ ಮಾಡಿರುವ ವೆಚ್ಚವನ್ನು ...

ಬೆಂಗಳೂರು: ಜಯಲಲಿತಾ, ಶಶಿಕಲಾ ನಟರಾಜನ್ ಆಕ್ರಮ ಆಸ್ತಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಕರ್ನಾಟಕ ಸರ್ಕಾರ ಮಾಡಿರುವ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಬೇಕು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ತಮಿಳುನಾಡು ಸರ್ಕಾರ 5 ಕೋಟಿ ರು ನೀಡಬೇಕು ಎಂದು ಹೇಳಿದೆ. ಅದರ ಹೊರತಾಗಿಯೂ ಸುದೀರ್ಘ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಹಣ ಖರ್ಚು ಮಾಡಿದೆ. ಹೀಗಾಗಿ ಈ ಎಲ್ಲಾ ಖರ್ಚು ವೆಚ್ಚಗಳನ್ನು ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಪತ್ಕ ಬರೆಯುವುದಾಗಿ ತಿಳಿಸಿದ್ದಾರೆ.
ಸುಪ್ರೀಂ ನಿರ್ದೇಶನದ ಮೇರೆಗೆ ಪ್ರಾಸಿಕ್ಯೂಟರ್ ನೇಮಿಸಿ ಈ ಪ್ರಕರಣವನ್ನು ರಾಜ್ಯವೇ ನಿರ್ವಹಿಸಿತ್ತು. ಈ ಪ್ರಕರಣ ಹೈಕೋರ್ಟಿನಲ್ಲಿ ವಜಾ ಆದ ಬಳಿಕ ಮೇಲ್ಮನವಿ ಸಲ್ಲಿಸಲಾಯಿತು. ಇದಕ್ಕೆ ಆಗಿರುವ ವೆಚ್ಚವನ್ನು ತಮಿಳುನಾಡು ಭರಿಸಬೇಕು ಎಂದರು.
ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಕರ್ನಾಟಕ ಸರಕಾರ ವ್ಯಯ ಮಾಡಿದ ಸುಮಾರು 5 ಕೋಟಿ ರೂ.ಗಳನ್ನು ಪಾವತಿ ಮಾಡುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿತ್ತು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


