ಮೌಲ್ಯಮಾಪನ ಬಹಿಷ್ಕರಿಸುವ ಪಿಯುಸಿ ಉಪನ್ಯಾಸಕರಿಗೆ ಜೈಲು ಶಿಕ್ಷೆ
ಮೌಲ್ಯಮಾಪನವನ್ನು ಬಹಿಷ್ಕರಿಸುವ ಪಿಯು ಕಾಲೇಜು ಉಪನ್ಯಾಸಕರುಗಳಿಗೆ ಆರು ತಿಂಗಳು ಜೈಲು ಶಿಕ್ಷೆ ಮತ್ತು 1 ಸಾವಿರು ರೂ ದಂಡ ವಿಧಿಸುವ..

ಬೆಂಗಳೂರು: ಮೌಲ್ಯಮಾಪನವನ್ನು ಬಹಿಷ್ಕರಿಸುವ ಪಿಯು ಕಾಲೇಜು ಉಪನ್ಯಾಸಕರುಗಳಿಗೆ ಆರು ತಿಂಗಳು ಜೈಲು ಶಿಕ್ಷೆ ಮತ್ತು 1 ಸಾವಿರು ರೂ ದಂಡ ವಿಧಿಸುವ 2017ರ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ.
ಮೌಲ್ಯಮಾಪನ ಬಹಿಷ್ಕರಿಸುವ ಸಂದರ್ಭದಲ್ಲಿ ಶಿಕ್ಷಕರನ್ನು ಬೆಂಬಲಿಸುವ ಜನಪ್ರತಿನಿಧಿಗಳು ಮತ್ತು ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳಿಗೆ ಜೈಲು ಸಜೆ ವಿಧಿಸುವ ಅಂಶವನ್ನು ತಿದ್ದುಪಡಿ ವಿಧೇಯಕ ಒಳಗೊಂಡಿದೆ.
ಬೇಡಿಕೆಗಳ ಈಡೇರಿಕೆಗಾಗಿ ಶಿಕ್ಷಕರು, ಉಪನ್ಯಾಸಕರು ಪರೀಕ್ಷೆ ಮತ್ತು ಮೌಲ್ಯಮಾಪನದ ಸಂದರ್ಭದಲ್ಲಿ ಕರ್ತವ್ಯ ಬಹಿಷ್ಕರಿಸಿ ಹೋರಾಟಕ್ಕಿಳಿಯುವುದನ್ನು ತಡೆಯಲು ರಾಜ್ಯ ಸರ್ಕಾರ ಸಿದ್ದಪಡಿಸಿರುವ "ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕ 2017'ಕ್ಕೆ ರಾಜ್ಯ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು ಮತ್ತು ಉಪನ್ಯಾಸಕರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಮಂಗಳವಾರ ಮುಕ್ತಾಯಗೊಂಡ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರ ವಿರೋಧದ ಹಿನ್ನೆಲೆಯಲ್ಲಿ ಈ ವಿಧೇಯಕ ಮಂಡನೆ ಮುಂದೂಡಲ್ಪಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಮುಂದಿನ ಅಧಿವೇಶನದಲ್ಲೂ ಈ ವಿಧೇಯಕ ಮಂಡಿಸಬಾರದು. ಸೌಹಾರ್ದಯುತ ಮಾತುಕತೆ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಆಗ್ರಹಿಸಿದ್ದಾರೆ.
ಇದು ಶಿಕ್ಷಕರ ಹೋರಾಟದ ದಮನನೀತಿಯಾಗಿದ್ದು, ವೇತನ ತಾರತಮ್ಯ ಸೇರಿದಂತೆ ತಮಗಾಗಿರುವ ಅನ್ಯಾಯ ಸರಿಪಡಿಸುವಂತೆ 1998ರಿಂದ ಪಿಯು ಕಾಲೇಜು ಪ್ರಾಚಾರ್ಯರು ಮತ್ತು ಉಪನ್ಯಾಸಕರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಹಿಂದೆ ಇದೇ ವಿಚಾರಕ್ಕಾಗಿ ಮೌಲ್ಯಮಾಪನ ಬಹಿಷ್ಕರಿಸಿ ಹೋರಾಟಕ್ಕಿಳಿದಾಗ "ಎಸ್ಮಾ' ಜಾರಿ ಮಾಡಿ ಸರ್ಕಾರ ದಮನ ನೀತಿ ಅನುಸರಿಸಿತ್ತು. ಕಳೆದ ವರ್ಷ ಕೂಡ ಮೌಲ್ಯಮಾಪನ ಬಹಿಷ್ಕರಿಸಿದಾಗ ಸುಳ್ಳು ಭರವಸೆ ನೀಡಿ ಮೌಲ್ಯಮಾಪನಕ್ಕೆ ಹಾಜರಾಗುವಂತೆ ಮಾಡ ಲಾಗಿತ್ತು ಎಂದು ಒಳಗೊಂಡಿದೆ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


