ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗೆ ದಾಖಲಿಸುವ ಮಕ್ಕಳ ವಯೋಮಿತಿ ಪರಿಷ್ಕರಣೆ
ಮುಂದಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ದಾಖಲಾಗುವ ಮಕ್ಕಳ ವಯಸ್ಸು ಜೂನ್ ವೇಳೆಗೆ 5 ವರ್ಷ 10 ತಿಂಗಳು ಪೂರ್ಣಗೊಂಡಿರಬೇಕು, ಹಾಗೆಯೇ ಪೂರ್ವ...

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ದಾಖಲಾಗುವ ಮಕ್ಕಳ ವಯಸ್ಸು ಜೂನ್ ವೇಳೆಗೆ 5 ವರ್ಷ 10 ತಿಂಗಳು ಪೂರ್ಣಗೊಂಡಿರಬೇಕು, ಹಾಗೆಯೇ ಪೂರ್ವ ಪ್ರಾಥಮಿಕ ತರಗತಿಗೆ ದಾಖಲಾಗುವ ಮಕ್ಕಳಿಗೆ 3 ವರ್ಷ 10 ತಿಂಗಳು ತುಂಬಿರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೊಲೆ ಹೊರಡಿಸಿದೆ.
ಈ ಹಿಂದಿನ ಸರ್ಕಾರಗಳು ನಿಗದಿ ಪಡಿಸಿದ್ದ ಮಕ್ಕಳ ದಾಖಲಾತಿ ವಯೋಮಿತಿ ಆದೇಶಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ರದ್ದು ಪಡಿಸಿದೆ.
ಮಕ್ಕಳಿಗೆ 5 ವರ್ಷ ತುಂಬಿದ ಕೂಡಲೇ ಪೋಷಕರು ಶಾಲೆಗೆ ಸೇರಿಸುತ್ತಾರೆ, ಮಕ್ಕಳು ಈ ವಯಸ್ಸಿಗೆ ಕಲಿಯಲು ಇನ್ನೂ ಶಕ್ತರಾಗಿರುವುದಿಲ್ಲ, ಆದರೆ ಹೊಸ ನಿಯಮದ ಪ್ರಕಾರ 5 ವರ್ಷ 10 ತಿಂಗಳು ಪೂರ್ಣಗೊಂಡಿದ್ದರೇ ಮಾತ್ರ ಶಾಲೆಗೆ ದಾಖಲಿಸಲು ಸಾಧ್ಯ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಂ ಆನಂದ್ ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಈ ಆದೇಶ ಜೂನ್ 2017 ರಿಂದ ಕಟ್ಟು ನಿಟ್ಟಾಗಿ ಜಾರಿಗೆ ಬರಲಿದೆ, 2016- 17ನೇ ಸಾಲಿನಲ್ಲಿ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
10 ನೇ ತರಗತಿ ಪೂರ್ಣಗೊಳಿಸುವ ವೇಳೆಗೆ ವಿದ್ಯಾರ್ಥಿಯ ವಯಸ್ಸು 16 ವರ್ಷ ವಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಯಮಗಳ ಪ್ರಕಾರ 16 ವರ್ಷ ಪೂರ್ಣಗೊಂಡಿದ್ದರೇ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಸಾಧ್ಯ, ಹೀಗಾಗ ಮಕ್ಕಳ ದಾಖಲಾತಿ ವಯೋಮಿತಿಯನ್ನು 5 ವರ್ಷ 10 ತಿಂಗಳಿಗೆ ನಿಗದಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


