ಕಪ್ಪತಗುಡ್ಡ ಸಂರಕ್ಷಿತ ಅರಣ್ಯ ಎಂದು ಘೋಷಿಸುವುದು ಬೇಡ: ಸಿಎಂ ಗೆ ರೈತರ ಮನವಿ
ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯವಾಗಿ ಘೋಷಿಸುವುದು ಬೇಡ ಎಂದು ಕಪ್ಪತಗುಡ್ಡ ರೈತರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ,...

ಬೆಂಗಳೂರು: ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯವಾಗಿ ಘೋಷಿಸುವುದು ಬೇಡ ಎಂದು ಕಪ್ಪತಗುಡ್ಡ ರೈತರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಕಪ್ಪತಗುಡ್ಡ ರೈತ ಮತ್ತು ರೈತ ಕಾರ್ಮಿಕರ ರಕ್ಷಣಾ ವೇದಿಕೆ ಸದಸ್ಯರು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಪ್ರದೇಶದಲ್ಲಿ 639 ರೈತ ಕುಟುಂಬದವರು ಕೃಷಿ ಮಾಡುತ್ತಿದ್ದಾರೆ. 90 ಸಾವಿರ ಜಾನುವಾರುಗಳ ಪೈಕಿ, 40 ಸಾವಿರ ಕುರಿ ಮೇಕೆ, ಹೊರ ಜಿಲ್ಲೆಯಿಂದ ಬರುವ 50 ಸಾವಿರ ಕುರಿ ಮೇಕೆಗಳು ಆಹಾರಕ್ಕಾಗಿ ಎಲ್ಲ ಋತುಮಾನಗಳಲ್ಲಿ ಈ ಪ್ರದೇಶದ ಹುಲ್ಲನ್ನೆ ಅವಲಂಬಿಸಿವೆ. ಈ ವ್ಯಾಪ್ತಿಯ 324 ಹೆಕ್ಟೇರ್ ಪ್ರದೇಶದಲ್ಲಿ ಸರ್ಕಾರ ಮತ್ತು ಖಾಸಗಿ ಬಹುರಾಷ್ಟ್ರೀಯ ಕಂಪೆನಿಗಳು ಪವನ ವಿದ್ಯುತ್ ಯಂತ್ರ ಅಳವಡಿಸಿ, ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ಸಂರಕ್ಷಿತ ಅರಣ್ಯ ಎಂದು ಘೋಷಿಸಿದರೆ ಪವನ ವಿದ್ಯುತ್ ಯಂತ್ರಗಳನ್ನು ತೆರವುಗಳಿಸಬೇಕಾಗುತ್ತದೆ. ಇದರಿಂದ ವಿದ್ಯುತ್ ಕ್ಷಾಮ ಉಂಟಾಗಲಿದೆ ಎಂದು ಮನವಿ ಹೇಳಿದೆ.
ರೈತರು, ಕೃಷಿ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಮೀಸಲು ಪ್ರದೇಶ ಎಂದು ಘೋಷಿಸಬಾರದು. ಅದರ ಬದಲು ಕಪ್ಪತಗುಡ್ಡ ವ್ಯಾಪ್ತಿಯ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿ ರುವ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಇನ್ನೂ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಫೆಬ್ರವರಿ 20 ರಂದು ರಾಜ್ಯ ವನ್ಯಜೀವಿ ಮಂಡಳಿಯ ಸಭೆ ನಡೆಸಲಿದ್ದಾರೆ, ಅಂದು ಇದರ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. 18 ಸಾವಿರ ಎಕರೆ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತ ಅರಣ್ಯ ಎಂದು ಘೋಷಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


