ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಫ್ಲೈಒವರ್ ನಿಂದ ಏರ್ ಶೋ ವೀಕ್ಷಿಸಿದ ಜನ
ಕಳೆದ ಐದು ದಿನಗಳಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋಗೆ ಶನಿವಾರ ಕಡೆಯ ದಿನವಾಗಿದ್ದು,..

Published On :
ಬೆಂಗಳೂರು: ಕಳೆದ ಐದು ದಿನಗಳಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋಗೆ ಶನಿವಾರ ಕಡೆಯ ದಿನವಾಗಿದ್ದು, ಲೋಹದ ಹಕ್ಕಿಗಳ ಹಾರಾಟ ನೋಡಲು ಜನಸಾಗರವೇ ಹರಿದು ಬಂದಿತ್ತು.
ಏರ್ ಶೋ ಕಡೆಯದಿನವಾದ ಇಂದು ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಹೆಬ್ಬಾಳದಿಂದ ಹುಣಸಮಾರನಹಳ್ಳಿಯವರೆಗೂ ಭಾರಿ ಸಂಚಾರ ದಟ್ಟಣೆ ಉಂಟಾಯಿತು. ಹಲವರು ತಮ್ಮ ವಾಹನಗಳಲ್ಲಿ ಫ್ಲೈಒವರ್ ಮೇಲೆ ನಿಲ್ಲಿಸಿ ಅಲ್ಲಿಂದಲೇ ವಿಮಾನಗಳ ಹಾರಾಟವನ್ನು ಕಣ್ತುಂಬಿಕೊಂಡರು.
ಹೈದರಾಬಾದ್ ರಸ್ತೆಯಲ್ಲಿ ನಿಧಾನಗತಿಯಲ್ಲಿ ವಾಹನಗಳು ಸಾಗುತ್ತಿದ್ದರಿಂದ ವಾಹನ ಸವಾರರು ಪರದಾಡುತ್ತಿದ್ದರು. ಇನ್ನು ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುತ್ತಿರುವ ದೃಶ್ಯಗಳು ಕಂಡುಬಂತು. ಜತೆಗೆ ಏರ್ ಶೋ ನೋಡಲು ಆಗಮಿಸುವ ಜನರ ಕಾರು ನಿಲುಗಡೆ ಬಳಿ ಕಿಲೋಮಿಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


