ಬೆಳ್ಳಂದೂರು ಕೆರೆ ಸ್ವಚ್ಛಗೊಳಿಸುವಂತೆ ಸುತ್ತಲ ನಿವಾಸಿಗಳ ಪ್ರತಿಭಟನೆ
ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನಿನ್ನೆ ಸುತ್ತಮುತ್ತಲಿನ...

Published On :
ಬೆಂಗಳೂರು: ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನಿನ್ನೆ ಸುತ್ತಮುತ್ತಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕೆರೆಯಲ್ಲಿ ತ್ಯಾಜ್ಯ, ರಾಸಾಯನಿಕ ಅಂಶಗಳು ಸೇರಿ ಬೆಂಕಿ ಹತ್ತಿ ಉರಿದ ಘಟನೆ ಕಳೆದ ಮೂರು ವರ್ಷಗಳಲ್ಲಿ ಮೂರನೇ ಸಲ ನಡೆದಿದೆ. ಇದರಿಂದ ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸುಮಾರು 200 ಮಂದಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನವಾಗಿ ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ ಬಿ ಮತ್ತು ಕೆಎಸ್ ಪಿಸಿಬಿ ಅಧಿಕಾರಿಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ಬೆಳ್ಳಂದೂರು ಕೆರೆ ಸಮೀಪದ ನಿವಾಸಿ ಸೀಮಾ ಶರ್ಮಾ ಹೇಳುವ ಪ್ರಕಾರ,ಎರಡು ವರ್ಷಗಳ ಹಿಂದೆ ಗ್ರೀನ್ ಎಲಿಫೆಂಟ್ಸ್ ಎಂಬ ಸಂಸ್ಥೆಯೊಂದು ಮುಂದೆ ಬಂದು ಯಾವುದೇ ಖರ್ಚಿಲ್ಲದೆ ಕೆರೆ ಸ್ವಚ್ಛಗೊಳಿಸುವುದಾಗಿ ಹೇಳಿತ್ತು. ಅವರಿಗೆ ಭೂಮಿ ಮತ್ತು ವಾಹನದ ವ್ಯವಸ್ಥೆಯನ್ನು ಒದಗಿಸಬೇಕಾಗಿತ್ತು. ಆದರೆ ಅಧಿಕಾರಿಗಳು ಅದನ್ನು ಕೂಡ ನೀಡಲಿಲ್ಲ. ಕೆಲವೊಬ್ಬ ನಿವಾಸಿಗಳು ಅಲ್ಲಿರಲಾರದೆ ಬೇರೆಡೆಗೆ ಹೋಗಿ ನೆಲೆಸಿದ್ದಾರೆ ಎನ್ನುತ್ತಾರೆ.
ಸ್ಥಳೀಯ ಕಾರ್ಪೊರೇಟರ್ ಆಶಾ ಸುರೇಶ್, ಬಿಬಿಎಂಪಿ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ. ಸ್ವತಃ ಅವರೇ ಕೆರೆಯ ಕಡೆ ಮುಖ ಮಾಡಿಲ್ಲ. ಕಳೆದ ಬಾರಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಮೇಲೆ ಸ್ವಚ್ಛಗೊಳಿಸುವಂತೆ ಸುತ್ತಲಿನ ಗ್ರಾಮಸ್ಥರು ಆನ್ ಲೈನ್ ನಲ್ಲಿ ಸಹಿ ಹಾಕಿ ಮುಖ್ಯಮಂತ್ರಿಗೆ ಕಳುಹಿಸಿದ್ದಾರೆ. ಅದರಡಿ 46,971 ಮಂದಿ ಸಹಿ ಹಾಕಿದ್ದಾರೆ. 50,000 ಮಂದಿಯ ಸಹಿ ಬೇಕಾಗಿದ್ದು, ಇನ್ನು 3,000 ಮಂದಿಯ ಸಹಿ ಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


