ಆರ್ ಎಸ್ಎಸ್ ನ ಹಿರಿಯ ಪ್ರಚಾರಕ ಮೈ.ಚ. ಜಯದೇವ್ ನಿಧನ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)ನ ಹಿರಿಯ ಪ್ರಚಾರಕ ಮೈ.ಚ ಜಯದೇವ್ (83) ಫೆ.20 ರಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

Published On :
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)ನ ಹಿರಿಯ ಪ್ರಚಾರಕ ಮೈ.ಚ ಜಯದೇವ್ (83) ಫೆ.20 ರಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ವಯೋಸಹಜ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಯದೇವ್ ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪಾರ್ಥಿವ ಶರೀರವನ್ನು ಆರ್ ಎಸ್ಎಸ್ ನ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಅಂತಿಮ ದರ್ಶನಕ್ಕೆ ಇರಿಸಿದ ನಂತರ ಚಾಮರಾಜ ಪೇಟೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಫೆಬ್ರವರಿ 9, 1934ರಲ್ಲಿ ಮೈಸೂರಿನಲ್ಲಿ ಜನಿಸಿದ್ದ ಮೈಸೂರು ಚನ್ನಬಸಪ್ಪ ಜಯದೇವ (ಮೈ.ಚ. ಜಯದೇವ್) ಬಿ.ಎಸ್ಸಿ. ಪದವಿ ಪೂರೈಸಿದ ನಂತರ ಕಾನೂನು ವ್ಯಾಸಂಗ ಮಾಡಿದ್ದರು. ಬೆಂಗಳೂರಿನ ಪ್ರತಿಷ್ಠಿತ HMT- Hindustan Garage Motors ನಲ್ಲಿಯೂ ಮ್ಯಾನೇಜರ್ ಆಗಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಜಯದೇವ್ ನಂತರದ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರಧಾರೆಯತ್ತ ಆಕರ್ಷಿತರಾಗಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ಮೈ.ಚ ಜಯದೇವ್ ಅವರು ರಾಷ್ಟ್ರೋತ್ಥಾನ ಪರಿಷತ್‌ನ ಸ್ಥಾಪನೆಯಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದರು. 1965ರಿಂದ 1995ರ ತನಕ ಮೂರು ದಶಕಗಳ ಕಾಲ ರಾಷ್ಟ್ರೋತ್ಥಾನ ಪರಿಷತ್‌ನ ಜನರಲ್ ಮ್ಯಾನೇಜರ್ ಆಗಿ ಮೈ.ಚ ಜಯದೇವ್ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


