ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಮತ್ತು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್ ಭೇಟಿ
ಕ್ರಮ ಆಸ್ತಿ ಪ್ರಕರಣ ಸಂಬಂಧದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರನ್ನು ..

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣ ಸಂಬಂಧದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರನ್ನು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಭೇಟಿಯಾಗಿದ್ದಾರೆ.
ನಿನ್ನೆ ಸಂಜೆ ಸುಮಾರು 4.50 ಕ್ಕೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ ದಿನಕರನ್, ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಶಶಿಕಲಾರೊಂದಿಗೆ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು ಮುಖ್ಯಮಂತ್ರಿಯಾಗಿ ಫೆಬ್ರವರಿ 18 ರಂದು ಪಳನಿಸ್ವಾಮಿ ಅಧಿಕಾರ ಸ್ವೀಕರಿಸಿದ ಮೇಲೆ ಶಶಿಕಲಾ ಅವರನ್ನು ಭೇಟಿ ಮಾಡಿದವರಲ್ಲಿ ದಿನಕರನ್ ಮೊದಲಿಗರಾಗಿದ್ದಾರೆ.
ಇಬ್ಬರು ಪ್ರಸಕ್ತವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ. ಪಳನಿಸ್ವಾಮಿ ಮತ್ತು ಇತರ ಬೆಂಬಲಿಗರು ಕೂಡ ಶೀಘ್ರವೇ ಶಶಿಕಲಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


