ರಾಜ್ಯ

ಚಾಮುಂಡಿ ಬೆಟ್ಟದಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಮೂವರು ಶಂಕಿತರು ವಶಕ್ಕೆ

ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಬಳಿ ಕಿಡಿಗೇಡಿಯೊಬ್ಬ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು,...

ಚಾಮುಂಡಿ ಬೆಟ್ಟದಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಮೂವರು ಶಂಕಿತರು ವಶಕ್ಕೆ
ನಂದಿ ವಿಗ್ರಹ
Published On :
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಬಳಿ ಕಿಡಿಗೇಡಿಯೊಬ್ಬ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆಯ ತುಟಿ ಹಾಗೂ ಮೈ ಕಚ್ಚಿ ಹಣ ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.
32 ವರ್ಷ ಜರ್ಮನ್ ಮಹಿಳೆ ಮೂರು ತಿಂಗಳ ಭಾರತ ಪ್ರವಾಸದಲ್ಲಿದ್ದು, ನಿನ್ನೆ ಸಂಜೆ 7.30ರ ಸುಮಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸೂರ್ಯಾಸ್ತ ನೋಡಿ ಬೆಟ್ಟದಿಂದ ಕೆಳಗೆ ಬರುತ್ತಿದ್ದ ವೇಳೆ ಯುವಕನೊಬ್ಬ ತನ್ನನ್ನು ಹಿಂಬಾಲಿಸಿಕೊಂಡು ಬಂದು ತನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ತನ್ನ ಬಳಿ ಇದ್ದ ಪರ್ಸ್ ಹಾಗೂ ಮೊಬೈಲ್ ಕೀಳಲು ಯತ್ನಿಸಿದ. ಆದರೆ ನಾನು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ನನ್ನ ತುಟಿ ಹಾಗೂ ಮೈ ಕಚಿ, ಬ್ಯಾಗಿನಲ್ಲಿದ್ದ 2,500 ರುಪಾಯಿ ದೋಚಿ ಪರಾರಿಯಾಗಿದ್ದಾನೆ ಎಂದು ಆರೋಪಿಸಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಮೈಸೂರಿನ ಕೆ.ಆರ್ ಠಾಣೆ ಪೊಲೀಸರು, ಇಂದು ಚಾಮುಂಡಿ ಬೆಟ್ಟದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.