ಬೆಳಗಾವಿಯ ಕಾಕತಿ ಅರಣ್ಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್
ಗೆಳೆಯನೊಂದಿಗೆ ಸುತ್ತಾಡಲು ಹೋಗಿದ್ದ ಅಪ್ರಾಪ್ತೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿಯ....

Published On :
ಬೆಳಗಾವಿ: ಗೆಳೆಯನೊಂದಿಗೆ ಸುತ್ತಾಡಲು ಹೋಗಿದ್ದ ಅಪ್ರಾಪ್ತೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿಯ ಕಾಕತಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಕಳೆದ ಫೆಬ್ರವರಿ 15ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗೆಳೆಯನೊಂದಿಗೆ ಸುತ್ತಾಡುತ್ತಿದ್ದ 16 ವರ್ಷ ಬಾಲಕಿಯ ಮೇಲೆ ಕಾಮುಕ ಯುವಕರ ಗುಂಪೊಂದು ಗ್ಯಾಂಗ್ ರೇಪ್ ಎಸಗಿ ಬೆದರಿಕೆ ಹಾಕಿರುವ ಕುರಿತು ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಬಂಧನಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ.
ಸಂತ್ರಸ್ತ ಬಾಲಕಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


