ರಾಘವೇಶ್ವರ ಶ್ರೀಗೆ ಬ್ಲ್ಯಾಕ್ ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಸಿಐಡಿ ಕ್ಲೀನ್ ಚಿಟ್
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪ್ರೇಮಲತಾ ದಿವಾಕರ್ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪ್ರೇಮಲತಾ ದಿವಾಕರ್ ದಂಪತಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.
ಬ್ಲ್ಯಾಕ್ ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ರಾಘವೇಶ್ವರ ಶ್ರೀಗಳಿಗೆ ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಹಾಗೂ ಪತಿ ದಿವಾಕರ್ ಅವರು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಆರೋಪಿಸಿ 2014ರ ಆ.26ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ರಾಮಕಥಾ ಗಾಯಕಿ ಪ್ರೇಮಲತಾ, ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರುದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್ ನಲ್ಲಿ ಸಿಐಡಿ ಉಲ್ಲೇಖಿಸಿದೆ.
ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ ದಂಪತಿ ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ರಾಘವೇಶ್ವರ ಶ್ರೀ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ನಲ್ಲಿ ಬ್ಲಾಕ್‍ಮೇಲ್ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


