ಎಸಿಬಿಗೆ ಬಿಗ್ ರಿಲೀಫ್; ಪ್ರಕರಣಗಳ ತನಿಖೆ ಮೇಲಿನ ಮಧ್ಯಂತರ ತಡೆ ಹೈಕೋರ್ಟ್ ನಿಂದ ತೆರವು!
ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಗೆ ಪೊಲೀಸ್ ಠಾಣಾ ಅಧಿಕಾರ ಇಲ್ಲ ಎಂದು ಹೇಳಿ ಅದರ ವ್ಯಾಪ್ತಿಯ ಪ್ರಕರಣಗಳ ವಿಚಾರಣೆ ಮೇಲೆ ಹೇರಲಾಗಿದ್ದ ತಡೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಗೆ ಪೊಲೀಸ್ ಠಾಣಾ ಅಧಿಕಾರ ಇಲ್ಲ ಎಂದು ಹೇಳಿ ಅದರ ವ್ಯಾಪ್ತಿಯ ಪ್ರಕರಣಗಳ ವಿಚಾರಣೆ ಮೇಲೆ ಹೇರಲಾಗಿದ್ದ ತಡೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ.
ಆ ಮೂಲಕ ಎಸಿಬಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಎಸಿಬಿಯಲ್ಲಿ ದಾಖಲಾಗಿದ್ದ 19 ಪ್ರಕರಣಗಳ ತನಿಖೆಯನ್ನು ಎಸಿಬಿ ಅಧಿಕಾರಿಗಳು ಮುನ್ನಡೆಸಲಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವ ಪೀಠ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದಷ್ಟೇ ಅಲ್ಲದೆ 19 ಪ್ರಕರಣಗಳ ತನಿಖೆ ಮುಂದುವರೆಸುವಂತೆಯೂ ಹೇಳಿದೆ.
ಇನ್ನು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಕೆಎಎಸ್ ಅಧಿಕಾರಿ ನಾಗ ಹನುಮಯ್ಯ, ಬಿಡಿಎಯ ವಿಶೇಷ ಭೂಸ್ವಾಧೀನ ಅಧಿಕಾರಿ ಪ್ರಕಾಶ್, ಭೂ ದಾಖಲೆಗಳ ಉಪನಿರ್ದೇಶಕರ ವಿರುದ್ಧದ ಪ್ರಕರಣಗಳನ್ನು ಇದೇ ಎಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದಲ್ಲದೆ ಅಕ್ರಮವಾಗಿ ಹೊಸ ನೋಟುಗಳನ್ನು ಸಂಗ್ರಹಿಸಿದ್ದ ಆರೋಪದ ಮೇರೆಗೆ ಬಂಧಿತರಾಗಿದ್ದ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿಎನ್ ಚಿಕ್ಕರಾಯಪ್ಪ ವಿರುದ್ಧದ ಪ್ರಕರಣವನ್ನೂ ಕೂಡ ಎಸಿಬಿ ಅಧಿಕಾರಿಗಳು ನಿರ್ವಹಿಸುತ್ತಿದ್ದರು. ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಆನಂದ ಬೈರಾರೆಡ್ಡಿ ಅವರ ನೇತೃತ್ವದ ಪೀಠ ತನಿಖೆಗೆ ತಡೆ ನೀಡಿತ್ತು.
ಇದೀಗ ತಡೆ ತೆರವಿಗೆ ಎಸಿಬಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಸದ್ಯ ಎಸಿಬಿಯಲ್ಲಿ ದಾಖಲಾಗಿರುವ 27 ಪ್ರಕರಣಗಳ ಪೈಕಿ 19 ಪ್ರಕರಣಗಳ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


