ರಾಜ್ಯ

ಬಳ್ಳಾರಿ ರಸ್ತೆ ಅಗಲೀಕರಣಕ್ಕೆ 27 ಕೋಟಿ ರು: ಟಿ.ಬಿ ಜಯಚಂದ್ರ

ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ವಿಂಡ್ಸರ್ ಮ್ಯಾನರ್‍ನಿಂದ ಹೆಬ್ಬಾಳದ ಕಡೆಗೆ 2 ಕಿಮೀ ರಸ್ತೆ ಅಗಲೀಕರಣಕ್ಕೆ ಕ್ಯಾಬಿನೆಟ್ ಒಪ್ಪಿಗೆ ...

ಬಳ್ಳಾರಿ ರಸ್ತೆ ಅಗಲೀಕರಣಕ್ಕೆ 27 ಕೋಟಿ ರು: ಟಿ.ಬಿ ಜಯಚಂದ್ರ
ಟಿ.ಬಿ ಜಯಚಂದ್ರ
Published On :

ಬೆಂಗಳೂರು: ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ವಿಂಡ್ಸರ್ ಮ್ಯಾನರ್‍ನಿಂದ ಹೆಬ್ಬಾಳದ ಕಡೆಗೆ 2 ಕಿಮೀ ರಸ್ತೆ ಅಗಲೀಕರಣಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ  ಕಾನೂನು ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

ಕ್ಯಾಬಿನೆಟ್ ಬಳಿಕ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು. ಈ ವೇಳೆ ಎಸ್‍ಸಿ, ಎಸ್‍ಟಿ ಬಡ್ತಿ ಮೀಸಲಾತಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಸುಪ್ರೀಂ ಕೋರ್ಟ್ ತೀರ್ಪಿನ ಸಂಪೂರ್ಣ ಅಧ್ಯಯನದ ಬಳಿಕ ಮುಂದಿನ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅನುದಾನವನ್ನು ಅಭಿವೃದ್ಧಿಗೆ ಬಳಸಲಾಗುವುದು. ಪಟ್ಟಣದಲ್ಲಿ ಸುಮಾರು 15 ಕಿಮೀ ಆಂತರಿಕ ರಸ್ತೆಗಳ ಅಭಿವೃದ್ಧಿ, 5 ಕಿಮೀ ಆರ್‌ಸಿಸಿ ಚರಂಡಿ ನಿರ್ಮಾಣ, ಪ್ರಮುಖ ರುದ್ರಭೂಮಿಗಳ ಅಭಿವೃದ್ಧಿ, ಹೈಮಾಸ್ಟ್‌ ದೀಪಗಳ ಅಭಿವೃದ್ಧಿ, ಕೊಳವೆ ಬಾವಿ ಕೊರೆಸುವುದು, ಪೈಪ್‌ಲೈನ್‌ ಅಳವಡಿಸುವ ಕಾಮಗಾರಿಗಳನ್ನು 2017-18ನೇ ಸಾಲಿನ ರಾಜ್ಯ ಹಣಕಾಸು ಆಯೋಗ ಹಾಗೂ ಕೇಂದ್ರ ಸರ್ಕಾರದ 14ನೇ ಹಣಕಾಸು ಆಯೋಗ ಯೋಜನೆ ಅಡಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.