ಬೆಂಗಳೂರಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ಪ್ರಕರಣ, ಆರೋಪಿ ಬಂಧನ
ಬಾಣಸವಾಡಿಯ ಎಚ್ಆರ್ಬಿಆರ್ ಲೇಔಟ್ನಲ್ಲಿ ಗಗನಸಖಿಯೊಬ್ಬರಿಗೆ ಬೈಕ್ ಸವಾರ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ...

Published On :
ಬೆಂಗಳೂರು: ಬಾಣಸವಾಡಿಯ ಎಚ್ಆರ್ಬಿಆರ್ ಲೇಔಟ್ನಲ್ಲಿ ಗಗನಸಖಿಯೊಬ್ಬರಿಗೆ ಬೈಕ್ ಸವಾರ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಶುಕ್ರವಾರ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು 24 ವರ್ಷದ ಪ್ರೇಮ್ ಕುಮಾರ್ ಎಂದು ಗುರುತಿಸಲಾಗಿದೆ.
ಕಳೆದ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಹೋಟೆಲ್ನಲ್ಲಿ ಊಟ ಮುಗಿಸಿ ತನ್ನ ಫ್ರೆಂಡ್ ಜೊತೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಪ್ರೇಮ್ ಕುಮಾರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿಲಾಗಿದೆ.
ಗಗನ ಸಖಿ ಎಚ್ ಆರ್ ಬಿಆರ್ ಲೇಔಟ್ ನಿವಾಸಿಯಾಗಿದ್ದು, ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


